Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:17 - ಕನ್ನಡ ಸತ್ಯವೇದವು C.L. Bible (BSI)

17 ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಯನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:17
24 ತಿಳಿವುಗಳ ಹೋಲಿಕೆ  

ಪೆಟ್ಟಿನ ಮೇಲೆ ಪೆಟ್ಟು ಕೊಟ್ಟು ನನ್ನನು ಬಡಕಲಾಗಿಸಿಹನು ಯುದ್ಧಶೂರನಂತೆ ಓಡಿಬಂದು ಮೇಲೆ ಬೀಳುತ್ತಿಹನು.


ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.


ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರನೆನಿಸಿಕೊಂಡಿದ್ದೇನೆ ನಿರ್ದೋಷಿಯಾಗಿದ್ದರೂ ನನಗೆ ದೇವರ ಪೆಟ್ಟು ಬಾಣಬಿಟ್ಟಂತಿದೆ.’


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.


ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.


ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಓಡಿಸೋಡಿಸವರನು ನೀ ಬೀಸುವ ಬಿರುಗಾಳಿಗೆ I ಗುರಿಪಡಿಸವರನು ನಿನ್ನಾ ಚಂಡಮಾರುತಕೆ II


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ಆತನ ಗರ್ಜನೆಗೆ ಮುರಿದುಬೀಳುವುವು ದೇವದಾರು ಮರಗಳು I ಹೌದ್ಹೌದು, ಸೀಳಿ ಹೋಳಾಗುವುವು ಲೆಬನೋನಿನ ಮಹಾ ವೃಕ್ಷಗಳು II


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


ನನ್ನನು ಎತ್ತಿ ತೂರಿಬಿಟ್ಟಿರುವೆ ಬಿರುಗಾಳಿಗೆ ತೊಳಲಾಡುತ್ತಿರುವೆನು ತುಫಾನಿನ ಆರ್ಭಟಕ್ಕೆ.


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ನೆಮ್ಮದಿಯಾಗಿದ್ದ ನನ್ನನು ಒಡೆದು ಬಡಿದುಹಾಕಿದ್ದಾನೆ ಕುತ್ತಿಗೆ ಹಿಸುಕಿ ನನ್ನನು ತುಂಡಾಗಿಸಿದ್ದಾನೆ. ಬಾಣಬಿಡಲು ನನ್ನನು ಗುರಿಹಲಗೆಯಾಗಿಸಿಕೊಂಡಿದ್ದಾನೆ.


ಯೋಬನು ಅನುಭವಿಸುತ್ತಿದ್ದ ಅಪಾರ ಬಾಧೆಯನ್ನು ನೋಡಿ ಆತನೊಂದಿಗೆ ಏನನ್ನೂ ಮಾತನಾಡದೆ ಏಳು ದಿನಗಳವರೆಗೆ ಹಗಲಿರುಳೂ ಅವನ ಹತ್ತಿರದಲ್ಲೇ ನೆಲದ ಮೇಲೆ ತೆಪ್ಪನೆ ಕುಳಿತಿದ್ದರು.


ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.


ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.


ನನ್ನನ್ನು ನಿರ್ಮಿಸಿ ರೂಪಿಸಿದಾತ ನೀನು ಆದರೆ ಈಗ ಮುಗಿಸಿಬಿಡುವಿಯೋ ಮಾನಸಾಂತರಗೊಂಡು?


“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.


‘ಆದರೂ ನನ್ನಲ್ಲಿ ದೇವರು ತಪ್ಪುಕಂಡುಹಿಡಿಯಬೇಕೆಂದಿದ್ದಾನೆ ನನ್ನನ್ನು ತನ್ನ ಶತ್ರುವೆಂದೇ ಭಾವಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು