Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:2 - ಕನ್ನಡ ಸತ್ಯವೇದವು C.L. Bible (BSI)

2 “ಹೌದು, ನೀನು ಹೇಳುವುದು ಸರಿಯೆಂದು ನನಗೆ ಗೊತ್ತು: ನರಮಾನವ ದೇವರ ಮುಂದೆ ಸತ್ಯವಂತನಾಗಿರುವುದೆಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಹೇಳಿದ್ದು ಸತ್ಯವೇ ಸರಿ; ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಹೌದು, ನೀನು ಹೇಳಿದ್ದು ಸತ್ಯವೇ ಸರಿ! ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿಜಕ್ಕೂ, ಇದು ಸತ್ಯ ಎಂದು ಬಲ್ಲೆನು; ಆದರೆ ಮನುಷ್ಯರು ದೇವರ ಮುಂದೆ ತಮ್ಮ ಮುಗ್ಧತೆಯನ್ನು ಪ್ರಮಾಣಿಕರಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:2
13 ತಿಳಿವುಗಳ ಹೋಲಿಕೆ  

“ದೇವರ ದೃಷ್ಟಿಯಲ್ಲಿ ಸತ್ಯವಂತನಾಗಿರಲು ಮಾನವನಿಗೆ ಸಾಧ್ಯವೆ? ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಲು ಅವನಿಂದ ಸಾಧ್ಯವೆ?”


ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.


ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.


‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


ಆಗ ಬೂಜ್‍ನವನಾದ ಬರಕೇಲನ ಮಗ ಎಲೀಹುವನಿಗೆ ಸಿಟ್ಟೇರಿತು. ಇವನು ರಾಮ್‍ಗೋತ್ರಕ್ಕೆ ಸೇರಿದವನು. ಯೋಬನು ತಾನು ದೇವರಿಗಿಂತ ನ್ಯಾಯವಂತನೆಂದು ಎಣಿಸಿಕೊಂಡ ಕಾರಣ ಎಲೀಹುವನಿಗೆ ಸಿಟ್ಟುಹತ್ತಿತ್ತು.


“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ, ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,


ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”


ಅದಕ್ಕೆ ಯೋಬನು ಉತ್ತರಿಸುತ್ತಾ ಹೀಗೆಂದನು:


ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು