Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:20 - ಕನ್ನಡ ಸತ್ಯವೇದವು C.L. Bible (BSI)

20 ನಾನು ಸತ್ಯವಂತನಾಗಿದ್ದರೂ ಬಾಯೇ ನಾನು ಅಪರಾಧಿಯೆಂದು ಒಪ್ಪಿಕೊಳ್ಳುತ್ತದೆ. ನಾನು ನಿರ್ದೋಷಿಯಾಗಿದ್ದರೂ ‘ನಿನ್ನದು ವಕ್ರಬುದ್ಧಿ’ ಎನ್ನುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ; ನಾನು ನಿರ್ದೋಷಿಯಾಗಿದ್ದರೂ, ದೇವರು ನನ್ನನ್ನು ಅಪರಾಧಿ ಎಂದು ನಿರೂಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:20
24 ತಿಳಿವುಗಳ ಹೋಲಿಕೆ  

‘ಯೋಬನು ತಿಳುವಳಿಕೆಯಿಲ್ಲದೆ ನುಡಿದಿದ್ದಾನೆ ಅವನ ಮಾತುಗಳಲ್ಲಿ ಬುದ್ದಿವಂತಿಕೆ ಇಲ್ಲ.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.


ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ಎಂದು ಹೇಳುತ್ತಾ ಯೋಬನು ಬಾಯಿತೆರೆಯುತ್ತಾನೆ ವ್ಯರ್ಥವಾಗಿ ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ ಬಹಳವಾಗಿ.”


“ಹೌದು, ನೀನು ಹೇಳುವುದು ಸರಿಯೆಂದು ನನಗೆ ಗೊತ್ತು: ನರಮಾನವ ದೇವರ ಮುಂದೆ ಸತ್ಯವಂತನಾಗಿರುವುದೆಂತು?


“ದೇವರ ದೃಷ್ಟಿಯಲ್ಲಿ ಸತ್ಯವಂತನಾಗಿರಲು ಮಾನವನಿಗೆ ಸಾಧ್ಯವೆ? ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಲು ಅವನಿಂದ ಸಾಧ್ಯವೆ?”


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ನಾನು ಸತ್ಯವಂತನಾಗಿದ್ದರೂ ವಾದಿಸಲಾರೆನು ನನ್ನ ನ್ಯಾಯಾಧೀಶನಲ್ಲಿ ದಯೆಯನು ಕೋರುವೆನು.


ಅಪರಾಧಿಯೆಂದೇ ನನಗೆ ನಿರ್ಣಯವಾಗಬೇಕಿದ್ದಲ್ಲಿ ನಾನೇಕೆ ಪ್ರಯಾಸಪಡಬೇಕು ವ್ಯರ್ಥವಾಗಿ?


ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು.


ನಾನು ದುರ್ಮಾರ್ಗಿಯಾದರಂತೂ ನನಗಿಲ್ಲ ಗತಿ ಸನ್ಮಾರ್ಗಿಯಾದರೂ ಕೂಡ ನಡೆವಂತಿಲ್ಲ ತಲೆಯೆತ್ತಿ ಏಕೆಂದರೆ ನಾಚಿ ನಿಂತಿರುವೆ, ಯಾತನೆಯ ಹೊರೆಹೊತ್ತಿ.


ಆಗ ನನ್ನ ದ್ರೋಹವನ್ನೆಲ್ಲ ಮೂಟೆಕಟ್ಟಿ ಮೂಲೆಗೆ ಹಾಕುವೆ ನನ್ನ ದೋಷವನ್ನು ಮುಚ್ಚಿ, ನೀ ಮರೆಮಾಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು