Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:22 - ಕನ್ನಡ ಸತ್ಯವೇದವು C.L. Bible (BSI)

22 ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಎಲ್ಲಾ ಒಂದೇ ಸರಿ, ಆದಕಾರಣ ನಾನು - ನಿರ್ದೋಷಿಯನ್ನೂ ದೋಷಿಯನ್ನೂ ಆತನು ನಾಶಮಾಡುತ್ತಾನೆ ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ‘ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶಮಾಡುತ್ತಾನೆ’ ಎಂಬುದು ನನ್ನ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದೆಲ್ಲಾ ಒಂದೇ ವಿಷಯ; ಆದ್ದರಿಂದ ನಾನು ಇದನ್ನು ಹೇಳುತ್ತೇನೆ: ‘ನಿರ್ದೋಷಿಯನ್ನೂ, ಕೆಟ್ಟವನನ್ನೂ ದೇವರು ದಂಡಿಸುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:22
10 ತಿಳಿವುಗಳ ಹೋಲಿಕೆ  

ನನ್ನನ್ನು ನಿರ್ಮಿಸಿ ರೂಪಿಸಿದಾತ ನೀನು ಆದರೆ ಈಗ ಮುಗಿಸಿಬಿಡುವಿಯೋ ಮಾನಸಾಂತರಗೊಂಡು?


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು ಮರಳಿ ಮನುಷ್ಯರೆಲ್ಲರೂ ಮಣ್ಣಾಗಿ ಮಾರ್ಪಡುವರು.


ದೇವರನು ಪ್ರೀತಿಸಿ ಬಾಳುವುದರಿಂದ ಪ್ರಯೋಜನವಿಲ್ಲವೆಂಬುದು ಇವನ ವಾದ.


“ನರಪುತ್ರನೇ, ಪ್ರವಾದಿಸು ಸರ್ವೇಶ್ವರ ಹೀಗೆನ್ನುತ್ತಾರೆಂದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು