ಯೋಬ 9:24 - ಕನ್ನಡ ಸತ್ಯವೇದವು C.L. Bible (BSI)24 ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಲೋಕವು ಕೆಟ್ಟವರ ಕೈವಶವಾಗಿದೆ; ನ್ಯಾಯಾಧಿಪತಿಗಳ ಮುಖಕ್ಕೆ ಮುಸುಕುಹಾಕಲಾಗಿದೆ; ಇದನ್ನು ಅನುಮತಿಸಿದವರು ದೇವರಲ್ಲದೆ ಮತ್ತೆ ಯಾರು? ಅಧ್ಯಾಯವನ್ನು ನೋಡಿ |
ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.