Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:25 - ಕನ್ನಡ ಸತ್ಯವೇದವು C.L. Bible (BSI)

25 ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ದಿನಗಳು ಅಂಚೆಯವನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನನ್ನ ದಿನಗಳು ಓಟಗಾರನಿಗಿಂತಲೂ ವೇಗವಾಗಿ ಹೋಗುತ್ತಿವೆ. ಸುಖವಿಲ್ಲದ ನನ್ನ ದಿನಗಳು ಹಾರಿಹೋಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆದರೆ ನನ್ನ ದಿನಗಳು ಅಂಚೆಯವನಿಗಿಂತಲೂ ತ್ವರೆಯಾಗಿವೆ; ಆನಂದವನ್ನೂ ನೋಡದೆ ದಿನಗಳು ಓಡಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:25
10 ತಿಳಿವುಗಳ ಹೋಲಿಕೆ  

ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II


ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.


ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು.


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು