Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:26 - ಕನ್ನಡ ಸತ್ಯವೇದವು C.L. Bible (BSI)

26 ಬೆಂಡಿನ ಹರಗಲು ದೌಡಾಯಿಸುವಂತೆ ಬೇಟೆಯ ಮೇಲೆ ಗರುಡವೆರಗುವಂತೆ ಕಳೆದುಹೋಗುತ್ತವೆ ಶೀಘ್ರಗತಿಯಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಜಂಬುಗಿಡದಿಂದ ಮಾಡಿದ ದೋಣಿಗಳಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗಲು ಹಾರಿಹೋಗುವಂತೆಯೂ ನನ್ನ ದಿನಗಳು ವೇಗವಾಗಿ ಹೋಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಪಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ದಿನಗಳು ವೇಗವಾಗಿ ಗತಿಸಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:26
8 ತಿಳಿವುಗಳ ಹೋಲಿಕೆ  

“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.


ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.


ಹದ್ದುಗಳ ವೇಗದಿಂದ ಹಿಂದಟ್ಟಿಬಂದರು ನಮ್ಮನ್ನು ಬೆನ್ನಟ್ಟಿ ಬೆಟ್ಟಗಳನ್ನೇರಿದರು ಅರಣ್ಯಗಳಲ್ಲಿ ನಮಗಾಗಿ ಹೊಂಚುಹಾಕಿದರು.


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು