Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:6 - ಕನ್ನಡ ಸತ್ಯವೇದವು C.L. Bible (BSI)

6 ಅದರ ಸ್ಥಾನದಿಂದ ಭೂಮಿಯನೆ ಕದಲಿಸುತ್ತಾನೆ ಅದರ ಸ್ತಂಭಗಳು ನಡುಗುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಭೂಲೋಕವನ್ನು ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಭೂಲೋಕವನ್ನು ಸ್ಥಳದೊಳಗಿಂದ ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುವನು; ಅದರ ಅಸ್ತಿವಾರಗಳನ್ನು ನಡುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾರೆ; ಅದರ ಸ್ತಂಭಗಳು ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:6
17 ತಿಳಿವುಗಳ ಹೋಲಿಕೆ  

ಅಂದು ದೇವರ ಧ್ವನಿಗೆ ಭೂಮಿಯು ನಡುಗಿತು. ಇಂದಾದರೋ, “ಇನ್ನೂ ಒಂದು ಸಾರಿ ನಾನು ಭೂಮಿಯನ್ನಷ್ಟೇ ಅಲ್ಲ, ಆಕಾಶವನ್ನೂ ನಡುಗಿಸುತ್ತೇನೆ,” ಎಂದು ಪ್ರತಿಜ್ಞೆಮಾಡಿರುತ್ತಾರೆ.


“ಸ್ವಲ್ಪಕಾಲದಲ್ಲೇ ಮತ್ತೊಮ್ಮೆ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಮರುಭೂಮಿಯನ್ನೂ ಅದರಿಸುವೆನು.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.


ಇಳೆಯು ಭೂನಿವಾಸಿಗಳ ಸಮೇತ ತಳಮಳಗೊಳ್ಳಲು I ಅದರ ತಳಹದಿಯ ಬಿಗಿಹಿಡಿದಿರುವವನು ನಾನಿಲ್ಲದಿನ್ನಾರು? II


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಆಕಾಶಮಂಡಲದ ಸ್ತಂಭಗಳು ಕದಲುವುವು ಆತನ ಗದರಿಕೆಗೆ ಅವುಗಳು ಬೆರಗಾಗುವುವು.


“ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು.


ನಡುಗು ಭೂಲೋಕವೇ, ಪ್ರಭುವಿನ ಮುಂದೆ I ನಡುನಡುಗು ಯಕೋಬ ದೇವರ ಮುಂದೆ II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.


ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.


ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಪರ್ವತಗಳೇ, ಕುಪ್ಪಳಿಸಿದಿರೇಕೆ ಟಗರುಗಳಂತೆ? I ಬೆಟ್ಟಗುಡ್ಡಗಳೇ, ಕುಣಿದಿರೇಕೆ ಕುರಿಮರಿಗಳಂತೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು