Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:11 - ಕನ್ನಡ ಸತ್ಯವೇದವು C.L. Bible (BSI)

11 ರೈತರೇ, ರೋದಿಸಿರಿ; ತೋಟಗಾರರೇ, ಪರಿತಪಿಸಿರಿ; ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆ ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ರೈತರೇ, ಕಂಗೆಡಿರಿ! ತೋಟಗಾರರೇ, ಗೋಳಾಡಿರಿ! ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆಯು ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರೈತರೇ, ದುಃಖಿಸಿರಿ, ದ್ರಾಕ್ಷಿತೋಟ ಮಾಡಿದವರೇ, ಗಟ್ಟಿಯಾಗಿ ಬೊಬ್ಬಿಡಿರಿ. ಗೋದಿಗಾಗಿಯೂ, ಜವೆಗೋದಿಗಾಗಿಯೂ ಅಳಿರಿ. ಯಾಕೆಂದರೆ ಬೆಳೆಯು ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:11
8 ತಿಳಿವುಗಳ ಹೋಲಿಕೆ  

ಬೀಜವನ್ನು ನೆಟ್ಟ ದಿನವೇ ಬೇಲಿಕಟ್ಟಿದೆ. ಮಾರನೆಯ ದಿನವೇ ಅದು ಮೊಳೆಯುವಂತೆ ಮಾಡಿದೆ. ಆದರೂ ನಿನಗೆ ಸಿಗುವ ಸುಗ್ಗಿ, ವ್ಯಾಧಿ ಮತ್ತು ಅತೀವ ವ್ಯಥೆಯೇ.


ನಾನು : “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?”


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.


ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


“ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅರಚಿಕೊಳ್ಳಿರಿ, ಅಯ್ಯೋ ದುರ್ದಿನವೇ! ಆ ದಿನ ಹತ್ತಿರವಾಯಿತು:


“ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು