ಯೋಯೇಲ 1:12 - ಕನ್ನಡ ಸತ್ಯವೇದವು C.L. Bible (BSI)12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದ್ರಾಕ್ಷಾಲತೆಯು ಆಶಾಭಂಗಪಟ್ಟಿದೆ; ಅಂಜೂರದ ಗಿಡವು ಕ್ಷೀಣವಾಗಿದೆ; ದಾಳಿಂಬ, ಖರ್ಜೂರ, ಸೇಬು, ಅಂತು ಸಕಲ ವನವೃಕ್ಷಗಳು ಒಣಗಿವೆ, ಆನಂದವು ತಗ್ಗಿ ನರಜನ್ಮದವರಿಗೆ ತಪ್ಪಿಹೋಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ. ಅಧ್ಯಾಯವನ್ನು ನೋಡಿ |