Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:14 - ಕನ್ನಡ ಸತ್ಯವೇದವು C.L. Bible (BSI)

14 ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:14
15 ತಿಳಿವುಗಳ ಹೋಲಿಕೆ  

ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು.


ಎಲ್ಲ ಯೆಹೂದ್ಯರೂ ಅವರ ಮಡದಿಮಕ್ಕಳೂ ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತಿದ್ದರು.


ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು.


ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು.


ಇದಲ್ಲದೆ ಅವನು ದೂತರ ಮುಖಾಂತರ, “ಬಾಳನ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಪಡಿಸಿಕೊಂಡು ಜಾತ್ರೆಗೆ ಬರಬೇಕು,” ಎಂದು ಇಸ್ರಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಪ್ರಕಟಿಸಿದನು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಬತ್ತನೆಯ ಒಂಬತ್ತನೆಯ ತಿಂಗಳಲ್ಲಿ ಜೆರುಸಲೇಮಿನವರೆಲ್ಲರು ಹಾಗು ಜುದೇಯದ ಊರುಗಳಿಂದ ಜೆರುಸಲೇಮಿಗೆ ಬಂದಿದ್ದವರೆಲ್ಲರು ಸರ್ವೇಶ್ವರನ ಸಮ್ಮುಖದಲ್ಲಿ ಉಪವಾಸವ್ರತವನ್ನು ಗೊತ್ತುಮಾಡಿ ಪ್ರಕಟಿಸಿದ್ದರು.


ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ?


ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು.


ನಾಚಿಕೆ ಇಲ್ಲದ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ,


“ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು