Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:5 - ಕನ್ನಡ ಸತ್ಯವೇದವು C.L. Bible (BSI)

5 ಅಮಲೇರಿದವರೇ, ಎಚ್ಚರಗೊಳ್ಳಿ; ಅತ್ತು ಪ್ರಲಾಪಿಸಿರಿ; ಕುಡುಕರೇ, ರೋದಿಸಿರಿ. ದ್ರಾಕ್ಷಾಬಳ್ಳಿ ನಾಶವಾಗಿದೆ; ಇನ್ನು ದ್ರಾಕ್ಷಾರಸ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಮಲೇರಿದವರೇ, ಎಚ್ಚರಗೊಳ್ಳಿರಿ, ಅಳಿರಿ; ಕುಡಿಕರೇ, ಅರಚಿಕೊಳ್ಳಿರಿ; ದ್ರಾಕ್ಷಾರಸವು ನಿಮ್ಮ ಬಾಯಿಗೆ ಇನ್ನು ಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಮಲೇರಿದವರೇ, ಎಚ್ಚರಗೊಂಡು ಅಳಿರಿ. ದ್ರಾಕ್ಷಾರಸವನ್ನು ಕುಡಿಯುವವರೇ, ಅಳಿರಿ. ಯಾಕೆಂದರೆ ನಿಮ್ಮ ಸಿಹಿಯಾದ ದ್ರಾಕ್ಷಾರಸವು ಮುಗಿದುಹೋಯಿತು. ಆ ದ್ರಾಕ್ಷಾರಸದ ಸವಿಯು ನಿಮಗೆ ಇನ್ನು ಸಿಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:5
13 ತಿಳಿವುಗಳ ಹೋಲಿಕೆ  

ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ನನ್ನ ಜನರಿಗಾಗಿ ಚೀಟುಹಾಕಿದ್ದಾರೆ. ವೇಶ್ಯಾಚಾರಕ್ಕಾಗಿ, ಮದ್ಯಪಾನಕ್ಕಾಗಿ, ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ಮಾರಾಟ ಮಾಡಿದ್ದಾರೆ.


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ರೈತರೇ, ರೋದಿಸಿರಿ; ತೋಟಗಾರರೇ, ಪರಿತಪಿಸಿರಿ; ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆ ನಾಶವಾಗಿದೆ.


“ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅರಚಿಕೊಳ್ಳಿರಿ, ಅಯ್ಯೋ ದುರ್ದಿನವೇ! ಆ ದಿನ ಹತ್ತಿರವಾಯಿತು:


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು