Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:7 - ಕನ್ನಡ ಸತ್ಯವೇದವು C.L. Bible (BSI)

7 ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿದೆ; ನನ್ನ ಅಂಜೂರದ ಗಿಡವನ್ನು ಸೀಳಿಹಾಕಿದೆ; ಅದರ ತೊಗಟೆಗಳನ್ನು ಸುಲಿದು ಬಿಸಾಡಿಬಿಟ್ಟಿದೆ; ಅದರ ರೆಂಬೆಗಳು ಬಿಳಿಚಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ನನ್ನ ದ್ರಾಕ್ಷೆಯ ಬಳ್ಳಿಗಳನ್ನು ಹಾಳುಮಾಡಿದೆ, ನನ್ನ ಅಂಜೂರದ ಗಿಡಗಳನ್ನು ಸಿಗಿದುಹಾಕಿದೆ, ಅವುಗಳನ್ನು ಬೋಳುಮಾಡಿ ಬಿಟ್ಟುಬಿಟ್ಟಿದೆ; ರೆಂಬೆಗಳು ಬಿಳುಪಾಗಿ ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಮಿಡತೆಗಳು ನನ್ನ ದ್ರಾಕ್ಷಿತೋಟದ ಹಣ್ಣುಗಳನ್ನೆಲ್ಲಾ ತಿಂದುಬಿಡುವವು. ನನ್ನ ಅಂಜೂರದ ಮರಗಳನ್ನು ನಾಶಮಾಡುವವು. ನನ್ನ ಮರಗಳ ತೊಗಟೆಗಳನ್ನು ಮಿಡತೆಗಳು ತಿಂದುಬಿಡುವವು. ಅದರ ಕೊಂಬೆಗಳು ಬಿಳುಪಾಗುವವು. ಮರಗಳು ನಾಶವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:7
12 ತಿಳಿವುಗಳ ಹೋಲಿಕೆ  

“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.


ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.


“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಬಾಡಿಹೋಗಿದೆ ದ್ರಾಕ್ಷಾಲತೆ, ದುಬಾರಿಯಾಗಿದೆ ದ್ರಾಕ್ಷಾರಸ, ನರಳುತಿದೆ ನಲಿಯುತ್ತಿದ್ದ ಜನಸಮೂಹ.


ನಾಶಮಾಡಿದ ನಾಡಿನ ಎಲ್ಲಾ ಮರವೃಕ್ಷಗಳನು I ದ್ರಾಕ್ಷಾಲತೆಗಳನ್ನು ಮೇಣ್ ಅಂಜೂರಗಿಡಗಳನು II


ನೆಲವೆಲ್ಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಂಡವು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಪಚ್ಚೆ ಪೈರುಗಳನ್ನೂ ಗಿಡಮರ ಕಾಯಿಗಳನ್ನೂ ತಿಂದುಬಿಟ್ಟವು. ಈಜಿಪ್ಟ್ ದೇಶದಲ್ಲೆಲ್ಲಾ ಹಸುರಾದ ಗಿಡಮರಗಳೊಂದೂ ಉಳಿಯಲಿಲ್ಲ.


ಅಪರಿಮಿತ ಸಂಖ್ಯೆಯಲ್ಲಿ ಅವು ಇಡೀ ಈಜಿಪ್ಟ್ ದೇಶದಲ್ಲಿ ಬಂದಿಳಿದು ಅದರ ಎಲ್ಲಾ ಕಡೆಗಳಲ್ಲಿ ಹರಡಿಕೊಂಡವು. ಅಂಥ ಮಿಡಿತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರುವಂತಿಲ್ಲ.


ಎದೆ ಬಡಿದುಕೊಂಡು ಗೋಳಾಡಿರಿ. ಏಕೆಂದರೆ ಹುಲುಸಾದ ಹೊಲಗಳು ಫಲವತ್ತಾದ ದ್ರಾಕ್ಷಾತೋಟಗಳು ನಾಶವಾಗಿವೆ.


“ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು