Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:9 - ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಧಾನ್ಯಪಾನನೈವೇದ್ಯಗಳು ಯೆಹೋವನ ಆಲಯದಲ್ಲಿ ನಿಂತುಹೋಗಿವೆ; ಯೆಹೋವನ ಸೇವಕರಾದ ಯಾಜಕರು ದುಃಖಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕರೇ, ಯೆಹೋವನ ಸೇವಕರೇ, ಗೋಳಾಡಿರಿ. ಯಾಕೆಂದರೆ ಇನ್ನು ಮುಂದೆ ಯೆಹೋವನ ಆಲಯದಲ್ಲಿ ಪಾನ ಮತ್ತು ಧಾನ್ಯಾರ್ಪಣೆ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:9
10 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ಇನ್ನವರು ಸರ್ವೇಶ್ವರಸ್ವಾಮಿಗೆ ನೈವೇದ್ಯವಾಗಿ ದ್ರಾಕ್ಷಾರಸವನ್ನು ಸುರಿಯರು. ಅವರ ಯಜ್ಞಗಳು ಆ ಸ್ವಾಮಿಗೆ ಮೆಚ್ಚುಗೆಯಾಗುವುದಿಲ್ಲ. ಅವರ ಆಹಾರ ಹೆಣದ ಮನೆಯ ಆಹಾರದಂತಿರುವುದು. ಅದನ್ನು ತಿನ್ನುವವರೆಲ್ಲರು ಅಶುದ್ಧರಾಗುವರು. ಅದು ಹೊಟ್ಟೆತುಂಬಲು ಮಾತ್ರ ಸರಿಯೇ ಹೊರತು ದೇವಾಲಯದಲ್ಲಿ ಮಾಡುವ ಅರ್ಪಣೆಗೆ ಸಲ್ಲದು.


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ದವಸಧಾನ್ಯಗಳ ವಿನಾಶವನ್ನು ಕಣ್ಣಾರೆ ಕಾಣುತ್ತಿದ್ದೇವಲ್ಲವೆ? ದೇವಾಲಯದ ಹರ್ಷ ಉತ್ಸವಗಳು ನಿಂತುಹೋಗಿವೆ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.


ನಮಗಾದರೋ ಸರ್ವೇಶ್ವರನೊಬ್ಬನೇ ದೇವರು; ನಾವು ಅವರನ್ನು ಬಿಡಲಿಲ್ಲ. ಸರ್ವೇಶ್ವರನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರು ಹಾಗೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರು ನಮಗಿರುತ್ತಾರೆ.


:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು