ಯೋಯೇಲ 2:10 - ಕನ್ನಡ ಸತ್ಯವೇದವು C.L. Bible (BSI)10 ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವುಗಳ ಆಗಮನದಿಂದ ಭೂವಿುಯು ಕಂಪಿಸುತ್ತದೆ, ಆಕಾಶಮಂಡಲವು ನಡುಗುತ್ತದೆ, ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; ಸೂರ್ಯಚಂದ್ರರು ಕಪ್ಪಾಗಿಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ. ಅಧ್ಯಾಯವನ್ನು ನೋಡಿ |