Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:13 - ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:13
41 ತಿಳಿವುಗಳ ಹೋಲಿಕೆ  

ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಪ್ರಭು ದಯಾಳು, ಕೃಪಾಪೂರ್ಣನು I ಸಹನಶೀಲನು, ಪ್ರೀತಿಮಯನು II


ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಸೌಲನು, ಅವನ ಮಗ ಯೋನಾತಾನನು ಹಾಗೂ ಸರ್ವೇಶ್ವರನ ಪ್ರಜೆಗಳಾದ ಇಸ್ರಯೇಲರು ಕತ್ತಿಯಿಂದ ಮೃತರಾದದ್ದಕ್ಕಾಗಿ


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ.


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಕೋಣೆಯ ಮೇಲೆ ತಿರುಗಾಡುತ್ತಿದ್ದ ಅರಸನು ಆ ಮಹಿಳೆಯ ಮಾತನ್ನು ಕೇಳಿದೊಡನೆ ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.


ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.


ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣೀತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ?


ಅರಸನು ಧರ್ಮೋಪದೇಶ ಗ್ರಂಥವಾಕ್ಯಗಳನ್ನು ಕೇಳಿದಾಗ,


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ಈ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.


ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು