Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:14 - ಕನ್ನಡ ಸತ್ಯವೇದವು C.L. Bible (BSI)

14 ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:14
20 ತಿಳಿವುಗಳ ಹೋಲಿಕೆ  

ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ದಾವೀದನು ಅವರಿಗೆ, “ಹುಡುಗ ಜೀವದಿಂದಿದ್ದಾಗ ಒಂದು ವೇಳೆ ಸರ್ವೇಶ್ವರ ಕೃಪೆಮಾಡಿ ಅವನನ್ನು ಉಳಿಸಾರು ಎಂದುಕೊಂಡು ಉಪವಾಸ ಮಾಡಿದೆ, ಕಣ್ಣೀರಿಟ್ಟೆ.


ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ದವಸಧಾನ್ಯಗಳ ವಿನಾಶವನ್ನು ಕಣ್ಣಾರೆ ಕಾಣುತ್ತಿದ್ದೇವಲ್ಲವೆ? ದೇವಾಲಯದ ಹರ್ಷ ಉತ್ಸವಗಳು ನಿಂತುಹೋಗಿವೆ.


ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.


ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಈ ಗಡ್ಡೆಗಳ ಹಾಗು ಇಲಿಗಳ ರೂಪವನ್ನು ಚಿನ್ನದಿಂದ ಮಾಡಿಸಿ ಇಸ್ರಯೇಲ್ ದೇವರಿಗೆ ಬಹುಮಾನವಾಗಿ ಕೊಡಿ. ಆಗ ಆತನ ಶಿಕ್ಷಾಹಸ್ತ ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಹಾಗು ಪ್ರಾಂತ್ಯಗಳನ್ನೂ ಬಿಟ್ಟುಹೋಗಬಹುದು.


ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.


ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು.


ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.


ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು