Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:15 - ಕನ್ನಡ ಸತ್ಯವೇದವು C.L. Bible (BSI)

15 ಸಿಯೋನ್ ಶಿಖರದ ಮೇಲೆ ನಿಂತು ಕೊಂಬೂದಿರಿ. ಉಪವಾಸ ದಿನವನ್ನು ಘೋಷಿಸಿರಿ. ಮಹಾಸಭೆಯನ್ನು ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಚೀಯೋನಿನಲ್ಲಿ ಕೊಂಬೂದಿರಿ, ಉಪವಾಸದಿನವನ್ನು ಗೊತ್ತುಮಾಡಿರಿ, ಸಂಘವನ್ನು ನೆರೆಯಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಚೀಯೋನಿನಲ್ಲಿ ತುತ್ತೂರಿ ಊದಿರಿ. ವಿಶೇಷ ಕೂಟಕ್ಕಾಗಿ ಜನರನ್ನು ಕೂಡಿಸಿರಿ. ಉಪವಾಸದ ದಿನ ಗೊತ್ತುಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಚೀಯೋನಿನಲ್ಲಿ ಕೊಂಬು ಊದಿರಿ; ಪವಿತ್ರ ಉಪವಾಸವನ್ನು ಸಾರಿರಿ; ಪವಿತ್ರ ಸಭೆಯನ್ನು ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:15
8 ತಿಳಿವುಗಳ ಹೋಲಿಕೆ  

ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.


ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು;


ಅವೆರಡನ್ನೂ ನೀನು ಊದಿಸುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಬತ್ತನೆಯ ಒಂಬತ್ತನೆಯ ತಿಂಗಳಲ್ಲಿ ಜೆರುಸಲೇಮಿನವರೆಲ್ಲರು ಹಾಗು ಜುದೇಯದ ಊರುಗಳಿಂದ ಜೆರುಸಲೇಮಿಗೆ ಬಂದಿದ್ದವರೆಲ್ಲರು ಸರ್ವೇಶ್ವರನ ಸಮ್ಮುಖದಲ್ಲಿ ಉಪವಾಸವ್ರತವನ್ನು ಗೊತ್ತುಮಾಡಿ ಪ್ರಕಟಿಸಿದ್ದರು.


ಇದಲ್ಲದೆ ಅವನು ದೂತರ ಮುಖಾಂತರ, “ಬಾಳನ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಪಡಿಸಿಕೊಂಡು ಜಾತ್ರೆಗೆ ಬರಬೇಕು,” ಎಂದು ಇಸ್ರಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಪ್ರಕಟಿಸಿದನು.


ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ;


ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು