ಯೋಯೇಲ 2:17 - ಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನ ಸೇವಕರಾದ ಯಾಜಕರು ದ್ವಾರಮಂಟಪಕ್ಕೂ ಯಜ್ಞವೇದಿಗೂ ನಡುವೆ ಅಳುತ್ತಾ - ಯೆಹೋವನೇ, ನಿನ್ನ ಜನರನ್ನು ಕರುಣಿಸು; ಅನ್ಯಜನಾಂಗಗಳು ಅವರ ಹೆಸರನ್ನು ಕಟ್ಟುಗಾದೆಯಾಗಿ ಎತ್ತುವ ನಿಂದೆಗೆ ನಿನ್ನ ಸ್ವಾಸ್ತ್ಯದವರನ್ನು ಗುರಿಮಾಡಬೇಡ; ಅವರ ದೇವರು ಎಲ್ಲಿ ಎಂಬ ಮಾತು ಮ್ಲೇಚ್ಫರಲ್ಲಿ ಏಕೆ ಸಲ್ಲಬೇಕು ಎಂದು ವಿಜ್ಞಾಪಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?” ಅಧ್ಯಾಯವನ್ನು ನೋಡಿ |