Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:24 - ಕನ್ನಡ ಸತ್ಯವೇದವು C.L. Bible (BSI)

24 ಕಣಗಳಲ್ಲಿ ಗೋದಿ ರಾಶಿರಾಶಿಯಾಗಿರುವುದು. ತೊಟ್ಟಿಗಳಲ್ಲಿ ದ್ರಾಕ್ಷಾರಸ, ತೈಲಗಳು ತುಂಬಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಣಗಳಲ್ಲಿ ಗೋದಿಯು ರಾಶಿರಾಶಿಯಾಗಿರುವದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕಣಜಗಳು ಗೋದಿಯಿಂದ ತುಂಬಿರುವವು. ಪಿಪಾಯಿಗಳು ಎಣ್ಣೆಯಿಂದಲೂ ದ್ರಾಕ್ಷಾರಸದಿಂದಲೂ ತುಂಬಿತುಳುಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕಣಗಳು ಧಾನ್ಯದಿಂದ ತುಂಬುವುವು. ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:24
8 ತಿಳಿವುಗಳ ಹೋಲಿಕೆ  

ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಕಾಲ ಬರುವುದು: ಆಗ - ಹೊಸ ಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು.


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ.


ನೀವು ಬಹು ದಿನದಿಂದ ಕೂಡಿಸಿಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ. ಹೊಸ ದವಸಧಾನ್ಯಗಳಿಗೆ ಕಣಜ ಸಾಲದೆ ಹಳೆಯದನ್ನು ತೆಗೆದುಬಿಡುವಿರಿ.


ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ಇಸ್ರಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಯೇಲರಿಗೆ ಫಲಕೊಡುವುವು; ಅವರ ಬರುವಿಕೆ ಸಮೀಪವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು