Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:25 - ಕನ್ನಡ ಸತ್ಯವೇದವು C.L. Bible (BSI)

25 ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಗುಂಪುವಿುಡತೆ, ಸಣ್ಣವಿುಡತೆ, ದೊಡ್ಡವಿುಡತೆ, ಚೂರಿವಿುಡತೆ, ಅಂತು ನಾನು ನಿಮ್ಮ ಮೇಲೆ ಕಳುಹಿಸಿದ ನನ್ನ ದೊಡ್ಡ ದಂಡು ತಿಂದುಬಿಟ್ಟ ವರುಷಗಳನ್ನು ನಾನು ನಿಮಗೆ ಕಟ್ಟಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು. ಮಿಡತೆಗಳ ಗುಂಪು, ದೊಡ್ಡ ಮಿಡತೆ, ನಾಶಮಾಡುವ ಮಿಡತೆ, ಹಾರುವ ಮಿಡತೆ, ಚೂರಿ ಮಿಡತೆಗಳು ಬಂದು ನಿಮಗಿದ್ದದ್ದನ್ನೆಲ್ಲಾ ತಿಂದುಬಿಟ್ಟವು. ಆದರೆ ಯೆಹೋವನಾದ ನಾನು ನಿಮ್ಮ ಸಂಕಟಕಾಲಕ್ಕೆ ಬದಲಾಗಿ ಸುಭಿಕ್ಷ ಕಾಲವನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:25
6 ತಿಳಿವುಗಳ ಹೋಲಿಕೆ  

“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ನೆಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವುವು; ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲ ಮರಗಳ ಎಲೆಚಿಗುರುಗಳನ್ನು ತಿಂದುಬಿಡುವುವು.


ಮಿಡಿತೆಗಳಿಗಿಂತ ಅಸಂಖ್ಯಾತರಾಗುವವರು ಕಡಿವರವರು ದಾಟಲಾಗದ ಈಜಿಪ್ಟಿನ ದಟ್ಟ ಕಾಡನ್ನು ಸರ್ವೇಶ್ವರನ ನುಡಿ ಇದು.


“ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು