Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:28 - ಕನ್ನಡ ಸತ್ಯವೇದವು C.L. Bible (BSI)

28 “ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:28
33 ತಿಳಿವುಗಳ ಹೋಲಿಕೆ  

ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು.”


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಅವನಿಗೆ ನಾಲ್ಕುಮಂದಿ ಅವಿವಾಹಿತ ಹೆಣ್ಣುಮಕ್ಕಳಿದ್ದರು. ಇವರೂ ದೇವರ ವಾಕ್ಯವನ್ನು ಪ್ರಚಾರಮಾಡುತ್ತಿದ್ದರು.


ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಆಗ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು :


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ನಾನು ಅಲ್ಲಿಗೆ ಇಳಿದುಬಂದು ನಿನ್ನೊಡನೆ ಮಾತಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಅವರಿಗೂ ಹಂಚಿಕೊಡುವೆನು. ಆಗ ನೀನೊಬ್ಬನೇ ಈ ಜನರ ಜವಾಬ್ದಾರಿಯನ್ನು ವಹಿಸಬೇಕಾಗುವುದಿಲ್ಲ; ನಿನ್ನ ಸಂಗಡ ಇವರೂ ವಹಿಸಿಕೊಳ್ಳುವರು.


ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.


ಸೌಲನಿಗೆ ಈ ವರ್ತಮಾನ ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು. ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು