Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:30 - ಕನ್ನಡ ಸತ್ಯವೇದವು C.L. Bible (BSI)

30 ಭೂಮ್ಯಾಕಾಶಗಳಲ್ಲಿ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತಧಾರೆ, ಅಗ್ನಿಪ್ರಳಯ, ಧೂಮಕೇತು ಕಾಣಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆ ಭೂಮ್ಯಾಕಾಶಗಳಲ್ಲಿ ರಕ್ತ ಬೆಂಕಿ ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:30
16 ತಿಳಿವುಗಳ ಹೋಲಿಕೆ  

ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಆದರೆ ಪಟ್ಟಣದಿಂದ ಹೊಗೆಯೆದ್ದು ಸ್ತಂಭದೋಪಾದಿಯಲ್ಲಿ ಕಾಣಿಸಲು ಇಸ್ರಯೇಲರು ತಿರುಗಿ ನಿಂತರು.


ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.


ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.


ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?


ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ ಓಡಿಹೋಗುತ್ತಿದ್ದವರು ತಿರುಗಿಕೊಂಡು ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚುಗಾರರೂ ಉಳಿದ ಇಸ್ರಯೇಲರೂ ತಮ್ಮ ತಮ್ಮೊಳಗೆ ಗೊತ್ತುಮಾಡಿದ್ದರು.


ಆಯಿಯ ಜನರು ಹಿಂದಿರುಗಿ ನೋಡಿದಾಗ ನಗರದ ಹೊಗೆ ಆಕಾಶಕ್ಕೆ ಏರುತ್ತಿತ್ತು. ಯಾವ ಮಾರ್ಗದಿಂದಲೂ ಅವರಿಗೆ ತಪ್ಪಿಸಿಕೊಳ್ಳಲು ಆಗಲಿಲ್ಲ. ಏಕೆಂದರೆ ಅರಣ್ಯದ ಕಡೆಗೆ ಓಡಿಹೋಗುತ್ತಿದ್ದ ಇಸ್ರಯೇಲರು ಹಿಂದಟ್ಟಿ ಬರುವವರ ಕಡೆಗೆ ತಿರುಗಿದ್ದರು.


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.


ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು