Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:31 - ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:31
21 ತಿಳಿವುಗಳ ಹೋಲಿಕೆ  

“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸೂರ್ಯಚಂದ್ರಗಳು ಮಂಕಾಗುತ್ತವೆ. ನಕ್ಷತ್ರಗಳು ಕಾಂತಿಗುಂದುತ್ತವೆ.


ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.


ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ರವಿ ಕಪ್ಪಾಗುವನು, ಶಶಿ ಕಡುಗೆಂಪಾಗುವನು, ಪ್ರಭುವಿನ ಮಹಿಮಾದಿನಕ್ಕೆ ಮುನ್ನ ಸಂಭವಿಸುವುವು ಇವೆಲ್ಲಾ.


ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.


ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು