Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:32 - ಕನ್ನಡ ಸತ್ಯವೇದವು C.L. Bible (BSI)

32 ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:32
32 ತಿಳಿವುಗಳ ಹೋಲಿಕೆ  

ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.


ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.


ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.


ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು


ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”


ಅಂತೆಯೇ, ದೈವಾನುಗ್ರಹದಿಂದ ಆಯ್ಕೆಯಾದ ಸ್ವಲ್ಪಮಂದಿ ಈಗಲೂ ಉಳಿದಿದ್ದಾರೆ.


ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ.


ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು