ಯೋಯೇಲ 2:5 - ಕನ್ನಡ ಸತ್ಯವೇದವು C.L. Bible (BSI)5 ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪರ್ವತಾಗ್ರಗಳಲ್ಲಿ ಅವು ಹಾರಾಡುವ ಶಬ್ದವು ರಥಗಳ ಚೀತ್ಕಾರದಂತೆಯೂ ಕೂಳೆಯನ್ನು ನುಂಗುವ ಬೆಂಕಿಯ ಚಟಪಟ ಧ್ವನಿಯ ಹಾಗೂ ಕೇಳಿಸುತ್ತದೆ; ಅವು ವ್ಯೂಹಕಟ್ಟಿಕೊಂಡ ಪ್ರಬಲವಾದ ಸೈನ್ಯವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕಿವಿಗೊಟ್ಟು ಕೇಳಿರಿ. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ. ಅಧ್ಯಾಯವನ್ನು ನೋಡಿ |