Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:6 - ಕನ್ನಡ ಸತ್ಯವೇದವು C.L. Bible (BSI)

6 ಅವುಗಳ ನೋಟ, ರಾಷ್ಟ್ರಗಳಿಗೆ ಪ್ರಾಣಸಂಕಟ; ಎಲ್ಲರ ಮುಖಗಳಿಗೆ ಮಂಕಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವುಗಳ ದೆಸೆಯಿಂದ ಜನಾಂಗಗಳು ಸಂಕಟಪಡುತ್ತವೆ; ಎಲ್ಲರ ಮುಖಗಳೂ ಬಾಡಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಸೈನ್ಯವನ್ನು ನೋಡುವ ಜನರು ಹೆದರಿ ನಡುಗುವರು; ಅವರ ಮುಖಗಳು ಕಂಗೆಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವುಗಳ ಮುಂದೆ ಜನಾಂಗಗಳು ಬಹಳವಾಗಿ ನೊಂದುಕೊಳ್ಳುತ್ತವೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:6
7 ತಿಳಿವುಗಳ ಹೋಲಿಕೆ  

ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.


ಗಂಡಸು ಪ್ರಸವವೇದನೆ ಪಡುವುದುಂಟೆ, ಹೇಳು? ಆದರೂ ಪ್ರತಿಯೊಬ್ಬನು ಹೆರುವ ಮಹಿಳೆಯಂತೆ ಸೊಂಟ ಹಿಸಿಕಿಕೊಳ್ಳುವುದು ನನ್ನ ಕಣ್ಣಿಗೆ ಬೀಳುತ್ತಿದೆ ಏಕೆ? ಅವರ ಮುಖಗಳು ಬಿಳಿಚಿಕೊಂಡಿವೆ ಏಕೆ?


ಈಗ ಅವರ ಮುಖ ಕಾರ್ಮೋಡಕ್ಕಿಂತ ಕಪ್ಪು ಬೀದಿಗಳಲ್ಲಿ ನೋಡುತ್ತಿದ್ದವರಿಗೆ ಅವರ ಗುರುತೂ ಸಿಗದು. ಅವರ ಚರ್ಮ ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ; ಒಣಗಿ ಕಟ್ಟಿಗೆಯಾಗಿದೆ.


ನನ್ನ ಪ್ರಜೆಯೆಂಬಾಕೆಯ ವೇದನೆಯಿಂದಲೆ ನಾನು ಅನುಭವಿಸುತ್ತಿರುವೆ ಮನೋಯಾತನೆ.


ಬೆಂಕಿಗೆ ಬಿಸಾಡಿದ ಒಣ ಬುದ್ಧಲಿಯಂತಾದೆ I ಆದರೂ ನಿನ್ನ ನಿಬಂಧನೆಗಳನ್ನು ಮರೆಯದಿದ್ದೆ II


ಮೃಗರಾಜನ ಗವಿಯೆಲ್ಲಿ? ಯುವಸಿಂಹಗಳ ಹಕ್ಕೆಯೆಲ್ಲಿ? ಸಿಂಹ ಸಿಂಹಿಣಿಗಳು, ಅವುಗಳ ಮರಿಗಳು ಹೆದರದೆ ತಿರುಗಾಡುತ್ತಿದ್ದ ಎಡೆಯೆಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು