Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:7 - ಕನ್ನಡ ಸತ್ಯವೇದವು C.L. Bible (BSI)

7 ಅವು ಶೂರರಂತೆ ಹೋರಾಡುತ್ತವೆ, ಯೋಧರಂತೆ ಗೋಡೆಗಳನ್ನೇರುತ್ತವೆ, ಸಾಲುಸಾಲಾಗಿ ನಡೆದು, ಕ್ರಮತಪ್ಪದೆ ಸಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆಯೇರುತ್ತವೆ; ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ, ಆ ಸಾಲುಗಳನ್ನು ಕಲಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಸೈನಿಕರು ವೇಗವಾಗಿ ಓಡುವರು; ಗೋಡೆ ಹತ್ತುವರು, ನೇರವಾಗಿ ಮುಂದೆ ಹೋಗುವರು. ದಾರಿಯಿಂದ ಅತ್ತಿತ್ತ ಹೋಗರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಶೂರರ ಹಾಗೆ ಓಡುತ್ತವೆ. ಯುದ್ಧಶಾಲಿಗಳ ಹಾಗೆ ಗೋಡೆ ಏರುತ್ತವೆ. ಅವೆಲ್ಲಾ ಸಾಲಾಗಿ ಮುನ್ನಡೆಯುತ್ತವೆ. ತಮ್ಮ ಹಾದಿಗಳನ್ನು ಬದಲು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:7
11 ತಿಳಿವುಗಳ ಹೋಲಿಕೆ  

ಮಿಡತೆಗಳು - ಅವಕ್ಕೆ ಅರಸನಿಲ್ಲ, ಆದರೂ ಅವೆಲ್ಲ ದಂಡುದಂಡಾಗಿ ಹೊರಡುತ್ತವೆ;


ಪಟ್ಟಣಗಳ ಮೇಲೆ ಹಾರಾಡುತ್ತವೆ, ಗೋಡೆಗಳ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತಿ, ಕಳ್ಳರಂತೆ ಕಿಟಕಿಗಳಲ್ಲಿ ನುಗ್ಗುತ್ತವೆ.


ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.


ಆ ದಿವಸ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು ಜಲದ್ವಾರದಲ್ಲೆ ಹತ್ತಿ ಹೋಗಿ ನನ್ನನ್ನು ದ್ವೇಷಿಸುವ ಕುರುಡರನ್ನೂ ಕುಂಟರನ್ನೂ ಕಂದಕದಲ್ಲಿ ನಾಶಮಾಡಿಬಿಡಲಿ,” ಎಂದು ಹೇಳಿದನು. ಆದುದರಿಂದಲೇ “ಕುರುಡರೂ ಕುಂಟರೂ ದೇವಾಲಯದೊಳಗೆ ಹೋಗಲಾಗದು,” ಎಂಬ ಹೇಳಿಕೆಯುಂಟು.


ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!


ನಿರ್ಮಿಸಿಹನಲ್ಲಿ ದೇವನು ಗುಡಾರವೊಂದನು ಸೂರ್ಯನಿಗೆ I ಬರುತಿಹನಾ ರವಿ ವರನಂತೆ ಧಾರಾಗೃಹದಿಂದ ಹೊರಗೆ I ಶೂರನಂತೆ, ಓಟದ ಪಥದಲ್ಲೋಡಲು ಹರುಷದೊಂದಿಗೆ II


ಪೆಟ್ಟಿನ ಮೇಲೆ ಪೆಟ್ಟು ಕೊಟ್ಟು ನನ್ನನು ಬಡಕಲಾಗಿಸಿಹನು ಯುದ್ಧಶೂರನಂತೆ ಓಡಿಬಂದು ಮೇಲೆ ಬೀಳುತ್ತಿಹನು.


ನೂಕುನುಗ್ಗಲಿಲ್ಲದೆ, ಸಾಲುಸಾಲಾಗಿ ನಡೆಯುತ್ತವೆ, ಸಾಲುಗಳನ್ನು ಒಡೆಯದೆ ಆಯುಧಗಳ ನಡುವೆ ನುಗ್ಗುತ್ತವೆ.


ಅಶೇರ್ಯರಿಂದ: 40,000 ಯುದ್ಧಸನ್ನದ್ಧರಾದ ವೀರರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು