Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ಆ ದಿನಗಳಲ್ಲಿ, ನಾನು ಯೆಹೂದದ ಮತ್ತು ಯೆರೂಸಲೇವಿುನ ದುರವಸ್ಥೆಯನ್ನು ತಪ್ಪಿಸುವ ಕಾಲದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆ ಸಮಯದಲ್ಲಿ ನಾನು ಯೆಹೂದ ಮತ್ತು ಜೆರುಸಲೇಮನ್ನು ಸೆರೆಯಿಂದ ಹಿಂದಕ್ಕೆ ತರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:1
23 ತಿಳಿವುಗಳ ಹೋಲಿಕೆ  

ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


“ಸೊದೋಮ್ ಮತ್ತು ಆಕೆಯ ಕುವರಿಯರ ಹಾಗೂ ಸಮಾರಿಯ ಮತ್ತು ಆಕೆಯ ಕುವರಿಯರ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.


ಆ ದಿನಗಳಲ್ಲಿ ದಾಸದಾಸಿಯರ ಮೇಲೂ ನನ್ನ ಆತ್ಮವನ್ನು ಸುರಿಸುವೆನು.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಅದಕ್ಕೆ ಮೋಶೆ, “ನನ್ನ ಗೌರವ ಕಾಪಾಡಲು ನಿನಗೇಕೆ ಅಸೂಯೆ? ಸರ್ವೇಶ್ವರನ ಅನುಗ್ರಹದಿಂದ ಅವರ ಜನರೆಲ್ಲರೂ ಆತ್ಮಶಕ್ತಿಯನ್ನು ಹೊಂದಿ ಪ್ರವಾದಿಸುವವರಾದರೆ ಎಷ್ಟೋ ಒಳ್ಳೆಯದು” ಎಂದನು.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು