Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:10 - ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿ ಮಾಡಿರಿ; ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ; ಬಲಹೀನನು ಸಹ ಬಲಾಢ್ಯನಂತೆ ಯುದ್ಧಕ್ಕೆ ನಿಂತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನಾಗಿ ಮಾಡಿರಿ. ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. ಬಲಹೀನನು, “ನಾನು ಶೂರನು” ಎಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ಗುಳಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿಯೂ ಕುಡುಗೋಲುಗಳನ್ನು ಬರ್ಜಿಗಳನ್ನಾಗಿಯೂ ಮಾಡಿರಿ; ದುರ್ಬಲನೂ ಶೂರನೆಂದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ನೇಗಿಲ ಗುಳಗಳನ್ನು ಕತ್ತಿಯನ್ನಾಗಿ ಮಾಡಿರಿ. ಕುಡುಗೋಲುಗಳಿಂದ ಬರ್ಜಿಯನ್ನು ಮಾಡಿರಿ. ನಿಮ್ಮ ಬಲಹೀನನಾದ ಸೈನಿಕನು, “ನಾನು ಬಲಶಾಲಿ” ಅನ್ನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ನೇಗಿಲುಗಳ ಗುಳಗಳನ್ನು ಖಡ್ಗಗಳನ್ನಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳನ್ನಾಗಿಯೂ ಬಡಿಯಿರಿ ಬಲಹೀನನು ಸಹ ನಾನು ಶಕ್ತಿವಂತನು ಎಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:10
7 ತಿಳಿವುಗಳ ಹೋಲಿಕೆ  

ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ನೀವೇ ಹೋಗಿ ಕಾರ್ಯವನ್ನು ನಿರ್ವಹಿಸಿರಿ. ಧೈರ್ಯದಿಂದ ಯುದ್ಧಮಾಡಿ. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನಿಮ್ಮನ್ನು ಅಪಜಯಗೊಳಿಸುವರು. ಜಯಾಪಜಯಗಳನ್ನು ನೀಡಲು ಅವರು ಶಕ್ತರು ಆಗಿರುತ್ತಾರಲ್ಲವೆ?” ಎಂದನು.


ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


“ಆದರೆ ಈಗ ಬುತ್ತಿಯಿರುವವನು ಅದನ್ನು ತೆಗೆದುಕೊಳ್ಳಲಿ; ಜೋಳಿಗೆಯಿರುವವನು ಹಾಗೆಯೇ ಮಾಡಲಿ; ಮತ್ತು ಕತ್ತಿಯಿಲ್ಲದವನು ತನ್ನ ಹೊದಿಕೆಯನ್ನು ಮಾರಿ ಒಂದನ್ನು ಕೊಂಡುಕೊಳ್ಳಲಿ.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು