Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:12 - ಕನ್ನಡ ಸತ್ಯವೇದವು C.L. Bible (BSI)

12 “ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜನಾಂಗಗಳು ಎಚ್ಚರಗೊಂಡು ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಲಿ; ಅಲ್ಲೇ ಸುತ್ತಣ ಜನಾಂಗಗಳಿಗೆಲ್ಲಾ ನ್ಯಾಯತೀರಿಸಲು ಆಸೀನನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜನಾಂಗಗಳು ಎಚ್ಚೆತ್ತು ಯೆಹೋಷಾಫಾಟನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ಜನಾಂಗಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:12
17 ತಿಳಿವುಗಳ ಹೋಲಿಕೆ  

ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.


ಸ್ವಾಮಿ ವಾದಿಸುವುದಕ್ಕೆ ಸಿದ್ಧವಿದ್ದಾರೆ. ಅವರು ಜನರ ನ್ಯಾಯವನ್ನು ನಿರ್ಣಯಿಸುವುದಕ್ಕೆ ತಯಾರಾಗಿದ್ದಾರೆ.


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.


“ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


“ಆ ದಿನದಲ್ಲಿ ನಾನು ಇಸ್ರಯೇಲಿನೊಳಗೆ ಲವಣಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ‘ಹಮೋನ್ ಗೋಗ್’ ಕಣಿವೆ ಎನಿಸಿಕೊಳ್ಳುವುದು.


ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.


ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.


‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ : ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು