Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:13 - ಕನ್ನಡ ಸತ್ಯವೇದವು C.L. Bible (BSI)

13 ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ. ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ, ದ್ರಾಕ್ಷಿಯ ಅಲೆಯು ತುಂಬಿದೆ. ತೊಟ್ಟಿಗಳು ತುಂಬಿ ತುಳುಕುತ್ತಿವೆ. ಜನಾಂಗಗಳ ದುಷ್ಟತನವು ವಿಪರೀತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 [ಯೆಹೋವನ ಶೂರರೇ,] ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ; ಬನ್ನಿರಿ, ತುಳಿಯಿರಿ; ದ್ರಾಕ್ಷೆಯ ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ಜನಾಂಗಗಳ ದುಷ್ಟತನವು ವಿಪರೀತವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬೆಳೆಯು ಪಕ್ವವಾಗಿದೆ; ಕುಡುಗೋಲನ್ನು ತನ್ನಿರಿ. ಬನ್ನಿ, ದ್ರಾಕ್ಷಿಯನ್ನು ಆಲೆಯಲ್ಲಿ ತುಳಿಯಿರಿ, ಯಾಕೆಂದರೆ ಆಲೆಯು ತುಂಬಿಹೋಗಿದೆ. ಪಿಪಾಯಿಗಳು ತುಂಬಿತುಳುಕುತ್ತಿವೆ, ಯಾಕೆಂದರೆ ಅವರ ದುಷ್ಟತ್ವವು ವಿಪರೀತವಾಗಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕುಡುಗೋಲನ್ನು ಹಾಕಿರಿ. ಏಕೆಂದರೆ ಬೆಳೆ ಪಕ್ವವಾಯಿತು. ಬಂದು ಇಳಿಯಿರಿ. ಏಕೆಂದರೆ ದ್ರಾಕ್ಷಿಯ ಆಲೆ ತುಂಬಿ ಇದೆ. ತೊಟ್ಟಿಗಳು ತುಳುಕುವಂತೆ ಅವರ ಕೆಟ್ಟತನವು ಬಹಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:13
14 ತಿಳಿವುಗಳ ಹೋಲಿಕೆ  

ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ,” ಎಂದರು.


“ಜುದೇಯವೇ, ನೀನು ಮಾಡುವ ದುಷ್ಕೃತ್ಯಗಳಿಗೆ ತಕ್ಕ ಸುಗ್ಗಿ ಕಾದಿದೆ.


“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು.


ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


“ಬೆಳೆ ಕೊಯ್ಯವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲ್ಗೊಂಡು ಏಳು ವಾರಗಳನ್ನು ಎಣಿಸಿ,


ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಅನಂತರ ನನ್ನ ಕಣ್ಣಿಗೆ ಒಂದು ಬಿಳಿಯ ಮೋಡ ಕಾಣಿಸಿತು. ಆ ಮೋಡದ ಮೇಲೆ ನರಪುತ್ರನಂಥ ವ್ಯಕ್ತಿಯೊಬ್ಬನು ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು; ಕೈಯಲ್ಲಿ ಹರಿತವಾದ ಕುಡುಗೋಲಿತ್ತು.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು