Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:15 - ಕನ್ನಡ ಸತ್ಯವೇದವು C.L. Bible (BSI)

15 ಸೂರ್ಯಚಂದ್ರಗಳು ಮಂಕಾಗುತ್ತವೆ. ನಕ್ಷತ್ರಗಳು ಕಾಂತಿಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೂರ್ಯಚಂದ್ರರು ಕತ್ತಲಾಗುವರು, ನಕ್ಷತ್ರಗಳು ಹೊಳೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:15
10 ತಿಳಿವುಗಳ ಹೋಲಿಕೆ  

ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


“ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು;


ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.


ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು;


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು