Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:17 - ಕನ್ನಡ ಸತ್ಯವೇದವು C.L. Bible (BSI)

17 “ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಯಾಗಿ ನಿಮ್ಮ ದೇವರಾದ ಯೆಹೋವನಾಗಿದ್ದೇನೆ ಎಂದು ನಿಮಗೆ ದೃಢವಾಗುವದು; ಆಗ ಯೆರೂಸಲೇಮು ಪವಿತ್ರವಾಗಿರುವದು; ಮ್ಲೇಚ್ಫರು ಇನ್ನು ಅದನ್ನು ಹಾದುಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:17
29 ತಿಳಿವುಗಳ ಹೋಲಿಕೆ  

ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು.


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.


ಆದರೆ ಜುದೇಯ ನಾಡು, ಜೆರುಸಲೇಮ್ ನಗರ ಜನಭರಿತವಾಗಿ ಇರುವುದು. ಸರ್ವೇಶ್ವರಸ್ವಾಮಿಯಾದ ನಾನು ಸಿಯೋನ್ ಪರ್ವತದಲ್ಲಿ ನೆಲೆಯಾಗಿರುವೆನು.”


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II


ಸಂಕೀರ್ತಿಸಿರಿ ಸಿಯೋನಿನಲಿ ವಾಸಿಸುವ ಪ್ರಭುವನು I ಪ್ರಕಟಿಸಿರಿ ಜನತೆಗೆ ಆತನ ಮಹತ್ಕಾರ್ಯಗಳನು II


ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.”


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಸ್ರಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.”


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲ ಪರದೇಶೀಯರು ಅವರ ಮಧ್ಯೆ ಹಾದುಹೋಗುವಂತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು