ಯೋಯೇಲ 3:2 - ಕನ್ನಡ ಸತ್ಯವೇದವು C.L. Bible (BSI)2 ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಸಕಲ ಜನಾಂಗಗಳನ್ನು ಕೂಡಿಸಿ ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡಿ ಅಲ್ಲಿ ನನ್ನ ಜನರಿಗಾಗಿ, ನನ್ನ ಸ್ವಾಸ್ತ್ಯವಾದ ಇಸ್ರಾಯೇಲ್ ಪ್ರಜೆಗೋಸ್ಕರ ಅವುಗಳೊಂದಿಗೆ ವಿವಾದಮಾಡುವೆನು. ಅವು ನನ್ನ ಜನರನ್ನು ದೇಶದೇಶಗಳಿಗೆ ಚದರಿಸಿ ನನ್ನ ದೇಶವನ್ನು ಹಂಚಿಕೊಂಡಿವೆಯಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು. ಅಧ್ಯಾಯವನ್ನು ನೋಡಿ |