Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:21 - ಕನ್ನಡ ಸತ್ಯವೇದವು C.L. Bible (BSI)

21 ಆದರೆ ಜುದೇಯ ನಾಡು, ಜೆರುಸಲೇಮ್ ನಗರ ಜನಭರಿತವಾಗಿ ಇರುವುದು. ಸರ್ವೇಶ್ವರಸ್ವಾಮಿಯಾದ ನಾನು ಸಿಯೋನ್ ಪರ್ವತದಲ್ಲಿ ನೆಲೆಯಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವುಗಳಲ್ಲಿ ಹತರಾದವರನ್ನು ನಿರ್ದೋಷಿಗಳೆಂದು ನಾನು ಬಹುಕಾಲ ನಿರ್ಣಯಿಸದೆ ಬಿಟ್ಟಿದ್ದೆನು, ಇನ್ನು ನಿರ್ಣಯಿಸುವೆನು; ಯೆಹೋವನು ಚೀಯೋನಿನಲ್ಲಿ ನೆಲೆಯಾಗಿಯೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಜನರು ನನ್ನ ಜನರನ್ನು ಕೊಂದರು. ಆದ್ದರಿಂದ ನಾನು ನಿಜವಾಗಿಯೂ ಅವರನ್ನು ಶಿಕ್ಷಿಸುವೆನು.” ಯಾಕೆಂದರೆ ದೇವರಾದ ಯೆಹೋವನು ಚೀಯೋನಿನಲ್ಲಿ ವಾಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಅವರ ಮುಗ್ಧ ರಕ್ತಕ್ಕೆ ಪ್ರತೀಕಾರ ತೀರಿಸದೆ ಬಿಡಬೇಕೇ? ಇಲ್ಲ, ನಾನು ಎಂದಿಗೂ ಬಿಡುವುದಿಲ್ಲ. ಯೆಹೋವ ದೇವರು ಚೀಯೋನಿನಲ್ಲಿ ವಾಸವಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:21
8 ತಿಳಿವುಗಳ ಹೋಲಿಕೆ  

ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


ನಾನು ನಿಮ್ಮನ್ನು ನಿಮ್ಮ ಎಲ್ಲ ಅಶುದ್ಧತೆಯಿಂದ ಉದ್ಧರಿಸಿ, ಕಾಳನ್ನು ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು