Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:3 - ಕನ್ನಡ ಸತ್ಯವೇದವು C.L. Bible (BSI)

3 ನನ್ನ ಜನರಿಗಾಗಿ ಚೀಟುಹಾಕಿದ್ದಾರೆ. ವೇಶ್ಯಾಚಾರಕ್ಕಾಗಿ, ಮದ್ಯಪಾನಕ್ಕಾಗಿ, ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ಮಾರಾಟ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೌದು, ನನ್ನ ಜನರಿಗಾಗಿ ಚೀಟುಹಾಕಿವೆ, ಸೂಳೆಗಾಗಿ ಹುಡುಗನನ್ನು ಬದಲು ಮಾಡಿವೆ, ದ್ರಾಕ್ಷಾರಸಕ್ಕೆ ಹುಡುಗಿಯನ್ನು ಬದಲು ಕೊಟ್ಟು ಪಾನಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಜನರಿಗಾಗಿ ಚೀಟು ಹಾಕಿದರು. ಅವರು ಹುಡುಗರನ್ನು ಮಾರಿ ಸೂಳೆಯನ್ನು ಕೊಂಡುಕೊಂಡರು; ಹುಡುಗಿಯರನ್ನು ಮಾರಿ ದ್ರಾಕ್ಷಾರಸವನ್ನು ಕೊಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಜನರಿಗೋಸ್ಕರ ಚೀಟುಹಾಕಿ, ಬಾಲಕರನ್ನು ವೇಶ್ಯಾ ವೃತ್ತಿಗೆ ಕೊಟ್ಟು, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕಾಗಿ ಮಾರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:3
8 ತಿಳಿವುಗಳ ಹೋಲಿಕೆ  

ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.


ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ನೀನು ತಟಸ್ಥನಾಗಿ ನೋಡುತ್ತಾ ನಿಂತಿದ್ದೆ. ಪರಕೀಯರು ಆತನ ಪುರದ್ವಾರಗಳನ್ನು ಪ್ರವೇಶಿಸಿ ಜೆರುಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಂದು ನೀನೂ ಅವರಂತೆ ಇದ್ದೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.


ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ಅನಾಥನನ್ನು ಕೊಂಡುಕೊಳ್ಳಲು ಚೀಟುಹಾಕುತ್ತೀರಿ ಆಪ್ತನನ್ನು ಮಾರಿಬಿಡಲು ವ್ಯಾಪಾರಮಾಡುತ್ತೀರಿ.


ಯಾವಾನಿನವರು, ತೂಬಲಿನವರು ಮತ್ತು ಮೆಷೆಕಿನವರು ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನು ಹಾಗು ತಾಮ್ರದ ಪಾತ್ರೆಗಳನ್ನು ನಿನಗೆ ಸರಬರಾಜು ಮಾಡುತ್ತಿದ್ದರು;


ಅಮಲೇರಿದವರೇ, ಎಚ್ಚರಗೊಳ್ಳಿ; ಅತ್ತು ಪ್ರಲಾಪಿಸಿರಿ; ಕುಡುಕರೇ, ರೋದಿಸಿರಿ. ದ್ರಾಕ್ಷಾಬಳ್ಳಿ ನಾಶವಾಗಿದೆ; ಇನ್ನು ದ್ರಾಕ್ಷಾರಸ ದೊರಕದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು