Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:7 - ಕನ್ನಡ ಸತ್ಯವೇದವು C.L. Bible (BSI)

7 ಇಂತಿರಲು, ನೀವು ಅವರನ್ನು ಮಾರಿದ ಊರುಗಳಿಂದ ದಂಗೆಯೆದ್ದು ಹೊರಬರುವಂತೆ ಅವರನ್ನು ಹುರಿದುಂಬಿಸುವೆನು. ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟುಬರುವಂತೆ ನಾನು ಅವರನ್ನು ಹುರಿಗೊಳಿಸಿ ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ದೂರದ ಸ್ಥಳಗಳಿಗೆ ನನ್ನ ಜನರನ್ನು ಕಳುಹಿಸಿದಿರಿ, ಆದರೆ ನಾನು ಅವರನ್ನು ಹಿಂದೆ ತರುವೆನು. ಮತ್ತು ನೀವು ಮಾಡಿದ ಕೃತ್ಯಕ್ಕೆ ನಾನು ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಇಗೋ, ಎಲ್ಲಿ ಅವರನ್ನು ಮಾರಿದಿರೋ, ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ, ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:7
24 ತಿಳಿವುಗಳ ಹೋಲಿಕೆ  

ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಇಗೋ ನೋಡು, ಅವರನ್ನು ಬರಮಾಡುವೆನು ಉತ್ತರದೇಶದಿಂದ ಅವರನ್ನು ಒಂದುಗೂಡಿಸುವೆನು ದಿಗಂತಗಳಿಂದ. ಅವರೊಡನೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ !


ಬಗ್ಗಿಸಿಕೊಂಡಿರುವೆ ಜುದೇಯ ಎಂಬ ಬಿಲ್ಲನು ಹೂಡಿರುವೆ ಅದರಲಿ ಎಫ್ರಯಿಮೆಂಬ ಬಾಣವನು. ಸಿಯೋನ್, ಎತ್ತಿಕಟ್ಟಿರುವೆ ನಿನ್ನವರನು ಗ್ರೀಕರಿಗಿದಿರಾಗಿ ಮಾಡುವೆ ನಿನ್ನನು ಶೂರನ ಕತ್ತಿಯನ್ನಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು