Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:1 - ಕನ್ನಡ ಸತ್ಯವೇದವು C.L. Bible (BSI)

1 ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರ ಬಳಿಯಲ್ಲಿತ್ತು; ಆ ವಾಕ್ಯವು ದೇವರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ವಾಕ್ಯ ಎಂಬಾತನಿದ್ದನು. ಆ ವಾಕ್ಯ ಎಂಬಾತನು ದೇವರೊಂದಿಗೆ ಇದ್ದನು. ಆ ವಾಕ್ಯ ಎಂಬಾತನೇ ಸ್ವತಃ ದೇವರಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜಗ್ ರಚುಚ್ಯಾ ಅದ್ದಿ ಶಬ್ದ್ ಹೊತ್ತೊ, ತೊ ಶಬ್ದ್ ದೆವಾಚ್ಯಾ ವಾಂಗ್ಡಾ ಹೊತ್ತೊ ತೊ ಶಬ್ದ್ ದೆವ್ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:1
39 ತಿಳಿವುಗಳ ಹೋಲಿಕೆ  

ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಆತನು ಧರಿಸಿದ್ದ ಉಡುಪು ರಕ್ತಪ್ರೋಕ್ಷಿತವಾಗಿತ್ತು. ಆತನಿಗೆ ‘ದೇವರ ವಾಕ್ಯ’ ಎಂದು ಹೆಸರು.


ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “


ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು.


“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.


ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.


ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಮಹಾದೇವಾಲಯದಲ್ಲಿ ದೇವರನ್ನು ಸತತವಾಗಿ ಸ್ತುತಿಮಾಡಿಕೊಂಡಿದ್ದರು.


ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು