Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:10 - ಕನ್ನಡ ಸತ್ಯವೇದವು C.L. Bible (BSI)

10 ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಲೋಕದಲ್ಲಿ ಇದ್ದನು; ಮತ್ತು ಲೋಕವು ಆತನ ಮೂಲಕವಾಗಿ ಉಂಟಾಯಿತು; ಆದರೂ ಲೋಕವು ಆತನನ್ನು ಅರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ವಾಕ್ಯ ಎಂಬಾತನು ಆಗಲೇ ಈ ಲೋಕದಲ್ಲಿದ್ದನು. ಈ ಲೋಕವು ವಾಕ್ಯ ಎಂಬಾತನ ಮೂಲಕ ನಿರ್ಮಾಣಗೊಂಡಿತು. ಆದರೆ ಈ ಲೋಕದವರು ಆತನನ್ನು ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೊ ಶಬ್ದ್ ಹ್ಯಾ ಜಗಾತ್ ಹೊತ್ತೊ, ಅನಿ ದೆವಾನ್ ತ್ಯೆಚ್ಯಾ ವೈನಾಚ್ ಹ್ಯೊ ಜಗ್ ರಚುನ್ ಹೊಲ್ಲೊ, ಜಾಲ್ಯಾರ್‍ಬಿ ಹ್ಯಾ ಜಗಾನ್ ತೆಕಾ ಒಳ್ಕುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:10
23 ತಿಳಿವುಗಳ ಹೋಲಿಕೆ  

ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.


ಅನಂತರ ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿ ಸರ್ವೇಶ್ವರ ಸ್ವಾಮಿ ಹೊರಟುಹೋದರು. ಅಬ್ರಹಾಮನು ತನ್ನ ಮನೆಗೆ ಹಿಂತಿರುಗಿದನು.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು