Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:13 - ಕನ್ನಡ ಸತ್ಯವೇದವು C.L. Bible (BSI)

13 ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವರು ರಕ್ತಸಂಬಂಧದಿಂದಾಗಲಿ ಕಾಮದಿಂದಾಗಲಿ ಪುರುಷಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇವರು ರಕ್ತದಿಂದಾಗಲಿ ಕಾಮದಿಂದಾಗಲಿ ಪುರುಷನ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ. ಇವರು ದೇವರಿಂದಲೇ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ಅಸೆಚ್ ದೆವಾಚ್ಯಾ ಪೊರಾಚ್ಯಾ ರುಪಾತ್ ಸ್ವಾಬಾವಿಕ್‍ ನ್ಹಯ್ ಅನಿ ರಗ್ತಾನ್ ನ್ಹಯ್ ಎಕ್ ಮಾನ್ಸಾಚ್ಯಾ ಸಮಂದಾಚ್ಯಾ ಆಶ್ಯಾನ್ ನ್ಹಯ್ ಅನಿ ಬಾಯ್ ಬಾಬಾಚ್ಯಾ ಅಶೆ ವೈನಾ ತೆನಿ ಉಪ್ಜುಕ್‍ನ್ಯಾತ್, ದೆವುಚ್ ಖುದ್ದ್ ತೆಂಚೊ ಬಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:13
25 ತಿಳಿವುಗಳ ಹೋಲಿಕೆ  

ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಆಕೆಯ ಗರ್ಭದಲ್ಲಿದ್ದ ಅವಳಿ ಮಕ್ಕಳು ಒಂದನ್ನೊಂದು ಒತ್ತರಿಸಿದಾಗ ಆಕೆ, “ನನಗೇತಕ್ಕೆ ಹೀಗಾಗುತ್ತಿದೆ?” ಎಂದುಕೊಂಡು ಸರ್ವೇಶ್ವರ ಸ್ವಾಮಿಯನ್ನು ವಿಚಾರಿಸಲು ಹೋದಳು.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.


ಇಸಾಕನಿಗೆ ಬೇಟೆಯ ಮಾಂಸ ಇಷ್ಟ; ಎಂದೇ ಏಸಾವನ ಮೇಲೆ ಹೆಚ್ಚು ಪ್ರೀತಿ. ರೆಬೆಕ್ಕಳಿಗಾದರೋ ಯಕೋಬನ ಮೇಲೆ ಹೆಚ್ಚು ಪ್ರೀತಿ.


ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು