Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:14 - ಕನ್ನಡ ಸತ್ಯವೇದವು C.L. Bible (BSI)

14 ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಶಬ್ದ್ ಮಾನುಸ್ ಹೊಲೊ ಅನಿ ಕುರ್ಪೆನ್ ಅನಿ ಖರ್‍ಯಾನ್ ಅಮ್ಚ್ಯಾ ಮದ್ದಿ ತೆನಿ ಜಿವನ್ ಕರ್ಲ್ಯಾನ್. ಅನಿ ಅಮಿ ತೆಚಿ ಮಹಿಮಾ ಬಗಟ್ಲಾವ್. ದೆವಾಚ್ಯಾ ಎಕ್ಲ್ಯಾಚ್ ಲೆಕಾನ್ ಅಪ್ನಾಚ್ಯಾ ಬಾಬಾಕ್ನಾ ಘೆಟಲ್ಲಿ ಮಹಿಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:14
60 ತಿಳಿವುಗಳ ಹೋಲಿಕೆ  

ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಅದೇ ರೀತಿ ಕ್ರಿಸ್ತಯೇಸು, ಪ್ರಧಾನಯಾಜಕನೆಂಬ ಉನ್ನತ ಪದವಿಗೆ ತನ್ನನ್ನೇ ಏರಿಸಿಕೊಳ್ಳಲಿಲ್ಲ. “ನೀನೇ ನನ್ನ ಪುತ್ರನು; ನಾನೇ ನಿನ್ನನ್ನು ಪಡೆದಿದ್ದೇನೆ,” ಎಂದ ದೇವರೇ ಅವರನ್ನು ಆ ಪದವಿಗೆ ಏರಿಸಿದರು.


ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು.


“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?


ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?


ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು.


ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.


ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು;


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ಆಕೆ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ಆತನು ಧರಿಸಿದ್ದ ಉಡುಪು ರಕ್ತಪ್ರೋಕ್ಷಿತವಾಗಿತ್ತು. ಆತನಿಗೆ ‘ದೇವರ ವಾಕ್ಯ’ ಎಂದು ಹೆಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು