Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:17 - ಕನ್ನಡ ಸತ್ಯವೇದವು C.L. Bible (BSI)

17 ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ದೆವಾನ್ ಖಾಯ್ದೆ ಮೊಯ್ಜೆಕ್ನಾ ದಿಲ್ಯಾನ್ ಖರೆ ಕುರ್ಪಾ ಅನಿ ಖರೆಪಾನ್ ಜೆಜು ಕ್ರಿಸ್ತಾ ವೈನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:17
37 ತಿಳಿವುಗಳ ಹೋಲಿಕೆ  

ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.


ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.


ಮೋಶೆ ಕೊಟ್ಟ ಧರ್ಮಶಾಸ್ತ್ರ ನಿಮಗಿದೆಯಲ್ಲವೇ, ಆದರೂ ಅದಕ್ಕೆ ಸರಿಯಾಗಿ ನಡೆಯುವವರಾರೂ ನಿಮ್ಮಲ್ಲಿ ಇಲ್ಲ. ನನ್ನನ್ನು ಕೊಲ್ಲಬೇಕೆಂದು ನೀವು ಹವಣಿಸುವುದೇಕೆ?” ಎಂದರು.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ದೇವರು ಅಬ್ರಹಾಮನೊಂದಿಗೆ ಮಾಡಿಮುಗಿಸಿದ ಒಪ್ಪಂದವನ್ನು ನಾನೂರ ಮೂವತ್ತು ವರ್ಷಗಳಾದ ಮೇಲೆ ಬಂದ ಧರ್ಮಶಾಸ್ತ್ರದಿಂದ ರದ್ದುಪಡಿಸಲಾಗದು; ಆ ವಾಗ್ದಾನವನ್ನು ವ್ಯರ್ಥಪಡಿಸಲಾಗದು.


ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.


ಇಸ್ರಯೇಲರು ಮರಳುಗಾಡಿನಲ್ಲಿ ಸಭೆಸೇರಿದ್ದಾಗ, ಅವರ ಮಧ್ಯೆ ಇದ್ದು, ಸೀನಾಯಿ ಬೆಟ್ಟದಲ್ಲಿ ಮಾತನಾಡಿದ ದೇವದೂತನೊಡನೆಯೂ ನಮ್ಮ ಪಿತೃಗಳೊಡನೆಯೂ ಸಂಭಾಷಿಸಿದವನು ಇವನೇ. ನಮಗೀಯಲು ಜೀವೋಕ್ತಿಗಳನ್ನು ದೇವರಿಂದ ಪಡೆದವನು ಇವನೇ.


ಆಪಾದಿಸುವವನು ಒಬ್ಬನಿದ್ದಾನೆ. ಆತನೇ ನೀವು ಆಶ್ರಯಿಸಿಕೊಂಡಿರುವ ಮೋಶೆ.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ.


ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II


ಯಕೋಬ ಸಂತತಿಯಾದ ನಮಗೆ ಇತ್ತನು ಮೋಶೆ ಧರ್ಮಶಾಸ್ತ್ರವನ್ನು ಸೊತ್ತಾಗಿ


ಮೋಶೆ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರ:


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು