Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:19 - ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೋಹಾನನು ಕೊಟ್ಟ ಸಾಕ್ಷಿ ಏನಂದರೆ - ಯೆಹೂದ್ಯರು ಯೆರೂಸಲೇವಿುನಿಂದ ಯಾಜಕರನ್ನೂ ಲೇವಿಯರನ್ನೂ ಅವನ ಬಳಿಗೆ ಕಳುಹಿಸಿ - ನೀನು ಯಾರೆಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನೀನು ಯಾರು?” ಎಂದು ಯೋಹಾನನನ್ನು ಕೇಳುವುದಕ್ಕಾಗಿ ಜೆರುಸಲೇಮಿನ ಯೆಹೂದ್ಯರು ಯೋಹಾನನ ಬಳಿಗೆ ಕೆಲವು ಯಾಜಕರನ್ನು ಮತ್ತು ಲೇವಿಯರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜೆರುಜಲೆಮಾಚಿ ಜುದೆವಾಂಚ್ಯಾ ಮುಖಂಡಾನಿ ಉಲ್ಲ್ಯಾ ಯಾಜಕಾಕ್ನಿ, ಅನಿ ಲೆವಿತಾಕ್ನಿ, ಜುವಾಂವಾಕ್ಡೆ “ತಿಯಾ ಕೊನ್?” ಮನುನ್ ಇಚಾರುಸಾಟ್ನಿ ಜುವಾಂವಾಕ್ಡೆ ಧಾಡುನ್ ದಿಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:19
27 ತಿಳಿವುಗಳ ಹೋಲಿಕೆ  

ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.


ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು.


ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, ‘ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.


ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು.


ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ, ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು.


ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. “ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?” ಎಂದು ಕೇಳತೊಡಗಿದರು.


“ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.


“ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.


ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು.


ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು.


ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.


ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.


ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಹಬ್ಬದ ಸಮಯದಲ್ಲಿ ಯೆಹೂದ್ಯರು ಯೇಸು ಎಲ್ಲಿದ್ದಾನೆಂದು ಹುಡುಕುತ್ತಿದ್ದರು. ಯೇಸುವನ್ನು ಕುರಿತು ಜನರ ಗುಂಪು ಗುಜುಗುಜು ಮಾತನಾಡುತ್ತಿತ್ತು.


ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು.


ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು.


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಯೆಹೂದ್ಯರು, “ನಿನಗಿನ್ನೂ ಐವತ್ತು ವರ್ಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಎಂದರು.


ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು.


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು