Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:21 - ಕನ್ನಡ ಸತ್ಯವೇದವು C.L. Bible (BSI)

21 ಹಾಗಾದರೆ, “ನೀನು ಎಲೀಯನೋ?’ ಎಂದು ಕೇಳಲು ‘ಅಲ್ಲ’ ಎಂದನು. “ನೀನು ಬರಬೇಕಾಗಿದ್ದ ಪ್ರವಾದಿಯಿರಬಹುದೇ?’ ಎಂದು ಅವರು ಮತ್ತೆ ಕೇಳಲು, “ಅದೂ ಅಲ್ಲ” ಎಂದು ಮರುನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹಾಗಾದರೆ ನೀನು ಯಾರು? ಎಲೀಯನೋ? ಎಂದು ಅವರು ಕೇಳಲು ಅಲ್ಲವೆಂದನು. ನೀನು ಬರಬೇಕಾದ ಆ ಪ್ರವಾದಿಯೋ? ಅಂದದ್ದಕ್ಕೂ ಅಲ್ಲವೆಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೂದ್ಯರು ಯೋಹಾನನಿಗೆ, “ಹಾಗಾದರೆ ನೀನು ಯಾರು? ನೀನು ಎಲೀಯನೋ?” ಎಂದು ಕೇಳಿದರು. ಅವನು, “ಇಲ್ಲ, ನಾನು ಎಲೀಯನಲ್ಲ” ಎಂದು ಉತ್ತರಿಸಿದನು. ಯೆಹೂದ್ಯರು, “ನೀನು ಪ್ರವಾದಿಯೋ?” ಎಂದು ಕೇಳಿದರು. ಯೋಹಾನನು, “ಇಲ್ಲ, ನಾನು ಪ್ರವಾದಿಯಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದಕ್ಕೆ ಅವರು, “ಹಾಗಾದರೆ ನೀನು ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ.” “ನೀನು ಆ ಪ್ರವಾದಿಯೋ?” ಎಂದು ಕೇಳಿದರು. ಅದಕ್ಕೆ ಅವನು, “ಅಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ತೆನಿ,ತಿಯಾ ಕೊನ್ ತರ್? ಎಲಿಯಾ ಕಾಯ್? ಮನುನ್ ಇಚಾರ್‍ಲ್ಯಾನಿ. ತನ್ನಾ ಜುವಾಂವಾನ್, ನಾ, ಮಿಯಾ ನ್ಹಯ್, ಮನುನ್ ಜಬಾಬ್ ದಿಲ್ಯಾನ್. ತನ್ನಾ,“ತಿಯಾ ಪ್ರವಾದಿ ಕಾಯ್?” ಮನುನ್ ತೆನಿ ಇಚಾರ್‍ಲ್ಯಾನಿ. ತನ್ನಾ ತೆನಿ, “ಮಿಯಾ ಪ್ರವಾದಿಬಿ ನ್ಹಯ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:21
12 ತಿಳಿವುಗಳ ಹೋಲಿಕೆ  

“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ.


ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.


ಇದನ್ನು ಕೇಳಿ ನೆರೆದಿದ್ದವರಲ್ಲಿ ಕೆಲವರು, “ಬರಬೇಕಾಗಿದ್ದ ಪ್ರವಾದಿ ಈತನೇ ಸರಿ,” ಎಂದರು.


ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.


“ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.


“ಹಾಗಾದರೆ ನೀನು ಯಾರೆಂದು ನಮಗೆ ತಿಳಿಸು. ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರಕೊಡಬೇಕಾಗಿದೆ. ನಿನ್ನನ್ನು ಕುರಿತು ನೀನು ಏನು ಹೇಳುತ್ತೀ?’ ಎಂದು ಅವರು ಮತ್ತೊಮ್ಮೆ ಕೇಳಿದರು.


ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು