Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:27 - ಕನ್ನಡ ಸತ್ಯವೇದವು C.L. Bible (BSI)

27 ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನೇ ನನ್ನ ಹಿಂದೆ ಬರತಕ್ಕವನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನನ್ನ ನಂತರ ಬರುವವನು ಆತನೇ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೊ ಮಾಜ್ಯಾ ಮಾನಾ ಯೆತಾ, ತ್ಯೆಚ್ಯಾ ಪಾಂಯಾತ್ಲ್ಯಾ ವ್ಹಾನಾಂಚಿ ನಾಡಿ ಸೊಡ್ತಲಿ ಸೈತ್ ಮಾಕಾ ಕಿಮ್ಮತ್ ನಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:27
9 ತಿಳಿವುಗಳ ಹೋಲಿಕೆ  

ಇವರು ‘ನನ್ನ ಬಳಿಕ ಬಂದವರಾದರೂ ನನಗಿಂತಲೂ ಮೊದಲೇ ಇದ್ದವರು; ಆದುದರಿಂದ ಇವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದುದು ಇವರನ್ನು ಕುರಿತೇ.


ಅದಕ್ಕೆ ಉತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ; ಅವರು ನಿಮಗೆ ಪವಿತ್ರಾತ್ಮ ಅವರಿಂದಲೂ ಅಗ್ನಿಯಿಂದಲೂ ದೀಕ್ಷಾಸ್ನಾನ ಕೊಡುವರು.


ಆತನು, “ನನ್ನಾನಂತರ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ; ಬಗ್ಗಿ ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ.


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, “ ‘ಅವರು ನನ್ನ ಬಳಿಗೆ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದ್ದು ಅವರನ್ನು ಕುರಿತೇ,” ಎಂದು ಘೋಷಿಸಿದನು.


ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು.


ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.


ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು.


ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, ‘ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು