Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:38 - ಕನ್ನಡ ಸತ್ಯವೇದವು C.L. Bible (BSI)

38 ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯೇಸು ಹಿಂತಿರುಗಿ ಅವರು ತನ್ನ ಹಿಂದೆ ಬರುವದನ್ನು ಕಂಡು - ನಿಮಗೆ ಏನು ಬೇಕಾಗಿದೆ ಎಂದು ಕೇಳಲು ಅವರು - ರಬ್ಬಿಯೇ, ನೀನು ಇಳುಕೊಂಡಿರುವದು ಎಲ್ಲಿ? ಅಂದರು. (ರಬ್ಬಿ ಅಂದರೆ ಗುರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸು ಹಿಂತಿರುಗಿ ನೋಡಿ, “ನಿಮಗೇನು ಬೇಕು?” ಎಂದು ಕೇಳಿದನು. ಆ ಇಬ್ಬರು, “ರಬ್ಬಿ, ನೀನು ಎಲ್ಲಿ ಇಳಿದುಕೊಂಡಿರುವೆ?” ಎಂದು ಕೇಳಿದರು. (“ರಬ್ಬಿ” ಅಂದರೆ “ಗುರು” ಎಂದರ್ಥ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು, ಅವರು, “ಬೋಧಕರೇ, ನೀವು ವಾಸಿಸುವುದು ಎಲ್ಲಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಜೆಜು ಫಾಟಿ ಪರ್ತುನ್ ಬಗುನ್ ಅನಿ ತೆನಿ ಅಪ್ನಾಚ್ಯಾ ಫಾಟ್ನಾ ಯೆತಲೆ ಬಗುನ್ “ತುಮ್ಕಾ ಕಾಯ್ ಪಾಜೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ರಾಬ್ಬಿ ತಿಯಾ ಖೈ ರ್‍ಹಾತೆಯ್?” ರಾಬ್ಬಿ ಮಟ್ಲ್ಯಾರ್ ಗುರುಜಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:38
30 ತಿಳಿವುಗಳ ಹೋಲಿಕೆ  

ಯೇಸು ಮತ್ತೊಮ್ಮೆ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಲು, “ನಜರೇತಿನ ಯೇಸುವನ್ನು,” ಎಂದು ಉತ್ತರಬಂದಿತು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಯೇಸು ಸ್ವಾಮಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದರು.


ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, “ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ?” ಎಂದು ಕೇಳಿದರು.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.


ಇವರು ಗಲಿಲೇಯದ ಬೆತ್ಸಾಯಿದ ಎಂಬ ಊರಿನವನಾದ ಫಿಲಿಪ್ಪನ ಬಳಿಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದು ಕೇಳಿಕೊಂಡರು.


ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು.


ಪೇತ್ರನು ಕೆಳಕ್ಕೆ ಹೋಗಿ ಆ ಜನರನ್ನು ನೋಡಿ, “ನೀವು ಹುಡುಕುತ್ತಿರುವ ವ್ಯಕ್ತಿ ನಾನೇ. ನೀವು ಬಂದ ಕಾರಣವೇನು?” ಎಂದು ವಿಚಾರಿಸಿದನು.


ಆಗ ಪ್ರಭು ಯೇಸು ಹಿಂದಿರುಗಿ ಪೇತ್ರನನ್ನು ದಿಟ್ಟಿಸಿ ನೋಡಿದರು. “ಈ ದಿನ ಕೋಳಿ ಕೂಗುವ ಮೊದಲೇ, ‘ನಾನು ಆತನನ್ನು ಅರಿಯೆನು,’ ಎಂದು ನನ್ನನ್ನು ಮೂರು ಬಾರಿ ನಿರಾಕರಿಸುವೆ,” ಎಂದು ಯೇಸು ನುಡಿದಿದ್ದ ಮಾತುಗಳು ಪೇತ್ರನ ನೆನಪಿಗೆ ಬಂದುವು.


ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು:


ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.


ಪಿಶಾಚಿಗಳಿಂದ ಬಿಡುಗಡೆ ಆಗಿದ್ದ ಆ ವ್ಯಕ್ತಿಯಾದರೋ, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ಅದಕ್ಕೆ ರೂತಳು: “ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನು ಅಲ್ಲೇ ವಾಸಿಸುತ್ತೇನೆ.


ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು!


ಹೇ ಸರ್ವೇಶ್ವರಾ, ನಿನ್ನ ರಾಜ್ಯ ಚಿರಕಾಲ ನಿನ್ನ ಸಿಂಹಾಸನ ತಲತಲಾಂತರಕ್ಕೂ ಸುಸ್ಥಿರ!


ಇದನ್ನು ಕೇಳಿದ ಆ ಶಿಷ್ಯರು ಯೇಸುವನ್ನು ಹಿಂಬಾಲಿಸಿದರು.


ಯೇಸು ಉತ್ತರವಾಗಿ, “ಬಂದು ನೋಡಿ” ಎನ್ನಲು ಅವರು ಹೋಗಿ ಯೇಸು ಸ್ವಾಮಿ ಇದ್ದ ಸ್ಥಳವನ್ನು ಕಂಡು ಆ ದಿನವನ್ನು ಅವರೊಡನೆ ಕಳೆದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು