Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:41 - ಕನ್ನಡ ಸತ್ಯವೇದವು C.L. Bible (BSI)

41 ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡುಕೊಂಡು ಅವನಿಗೆ - ಮೆಸ್ಸೀಯನು ನಮಗೆ ಸಿಕ್ಕಿದನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಮೊದಲನೆಯದಾಗಿ, ಅವನು ತನ್ನ ಅಣ್ಣನಾದ ಸೀಮೋನನನ್ನು ಕಾಣಲು ಹೋಗಿ ಅವನಿಗೆ, “ನಾವು ಮೆಸ್ಸೀಯನನ್ನು ಕಂಡುಕೊಂಡೆವು” ಎಂದು ಹೇಳಿದನು. (“ಮೆಸ್ಸೀಯ” ಅಂದರೆ “ಕ್ರಿಸ್ತನು” ಎಂದರ್ಥ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅಂದ್ರೆಯನು ಮೊದಲು ತನ್ನ ಸಹೋದರ ಸೀಮೋನನನ್ನು ಕಂಡು, “ನಾವು ಮೆಸ್ಸೀಯ ಆಗಿರುವವರನ್ನು ಕಂಡೆವು,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೊ ಅಪ್ನಾಚ್ಯಾ ಭಾವಾ ಸಿಮಾವಾಕ್ ಭೆಟಲ್ಲ್ಯಾ ತನ್ನಾ ತೆನಿ, “ಅಮ್ಕಾ ಮೆಸ್ಸಿಯಾ ಗಾವ್ಲೊ” ಮಟ್ಲ್ಯಾನ್ ಮೆಸ್ಸಿಯಾ, ಮಟ್ಲ್ಯಾರ್ ಕ್ರಿಸ್ತ್. ಮನುನ್ ತೆಕಾ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:41
21 ತಿಳಿವುಗಳ ಹೋಲಿಕೆ  

ಆಕೆ, “ಅಭಿಷಿಕ್ತನಾದ ಲೋಕೋದ್ಧಾರಕ ಬರುವನೆಂದು ನಾನು ಬಲ್ಲೆ. ಆತನು ಬಂದಾಗ ಎಲ್ಲವನ್ನೂ ತಿಳಿಸುವನು,” ಎಂದು ಹೇಳಿದಳು.


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.


“ನನ್ನ ದಾಸ ದಾವೀದನನು ಗುರುತಿಸಿರುವೆ I ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ II


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.


ಕಂಡಮೇಲೆ ಆ ಮಗುವಿನ ವಿಷಯವಾಗಿ ದೂತನು ತಮಗೆ ಹೇಳಿದ್ದನ್ನೆಲ್ಲ ಅವರಿಗೆ ತಿಳಿಯಪಡಿಸಿದರು.


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಅನಂತರ ಅವರು, “ಇದು ಶುಭವಾರ್ತೆಯ ದಿವಸ; ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾಗಬಹುದು. ಆದುದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತಾಡಿಕೊಂಡರು.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು