Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:45 - ಕನ್ನಡ ಸತ್ಯವೇದವು C.L. Bible (BSI)

45 ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಫಿಲಿಪಾಕ್ ನಾಥಾನಾಯೆಲ್ ಗಾವ್ಲೊ, ತನ್ನಾ ಫಿಲಿಪಾನ್ ತೆಕಾ, “ಮೊಯ್ಜೆನ್ ಅಪ್ನಾಚ್ಯಾ ಖಾಯ್ದ್ಯಾತ್ನಿ ಅನಿ ಪ್ರವಾದ್ಯಾನಿ ಅಪ್ನಾಚ್ಯಾ ಪುಸ್ತಕಾತ್ನಿ ಕೊನಾಚ್ಯಾ ವಿಶಯಾತ್ ಲಿವಲ್ಲ್ಯಾನಾತ್ ತೊ ಅಮ್ಕಾ ಗಾವ್ಲೊ. ತೊ ನಜರೆತಾತ್ಲೊ ಜೆಜು ಜುಜೆಚೊ ಲೆಕ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:45
41 ತಿಳಿವುಗಳ ಹೋಲಿಕೆ  

ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ಯೇಸು ಮತ್ತೊಮ್ಮೆ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಲು, “ನಜರೇತಿನ ಯೇಸುವನ್ನು,” ಎಂದು ಉತ್ತರಬಂದಿತು.


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.


“ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನಾನು ‘ಪ್ರಭೂ, ನೀವಾರು?’ ಎಂದು ಕೇಳಿದೆ. ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದರು ಅವರು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿ ಇದ್ದರು.


ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು.


ಚಳಿಕಾಯಿಸಿಕೊಳ್ಳುತ್ತಿದ್ದ ಪೇತ್ರನನ್ನು ಆಕೆ ದಿಟ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನ ಸಂಗಡ ಇದ್ದವನು,” ಎಂದಳು.


ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


“ನನ್ನ ವಿಷಯದಲ್ಲಿ ಹೇಳುವುದಾದರೆ, ಒಮ್ಮೆ ನಾನು ಯೇಸುವಿನ ನಾಮವನ್ನೇ ನಿರ್ಮೂಲಮಾಡಬೇಕೆಂದಿದ್ದೆ; ಅದಕ್ಕೆ ಅಗತ್ಯವಾದುದನ್ನೆಲ್ಲ ಮಾಡುವುದು ನನ್ನ ಕರ್ತವ್ಯ ಎಂದು ಎಣಿಸಿದ್ದೆ.


ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ.


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ಪಿಲಾತನು ಒಂದು ಫಲಕದ ಮೇಲೆ, ‘ನಜರೇತಿನ ಯೇಸು, ಯೆಹೂದ್ಯರ ಅರಸ’ ಎಂದು ಬರೆಸಿ ಶಿಲುಬೆಯ ಮೇಲ್ಗಡೆ ಇರಿಸಿದರು.


ಅವರು, “ನಜರೇತಿನ ಯೇಸುವನ್ನು,” ಎಂದರು. ಯೇಸು, “ನಾನೇ ಆತ,” ಎಂದು ಉತ್ತರಕೊಟ್ಟರು. ಅವರನ್ನು ಹಿಡಿದುಕೊಡಲಿದ್ದ ಗುರುದ್ರೋಹಿ ಯೂದನು ಅವರ ಸಂಗಡವೇ ನಿಂತುಕೊಂಡಿದ್ದನು.


ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.


ಯೇಸುಸ್ವಾಮಿ ಬೋಧಿಸಲು ಪ್ರಾರಂಭಿಸಿದಾಗ ಅವರಿಗೆ ಸುಮಾರು ಮೂವತ್ತು ವರ್ಷ ವಯಸ್ಸು. ಯೇಸು ಜೋಸೆಫನ ಮಗನೆಂದು ಜನರು ಭಾವಿಸಿದ್ದರು. ಜೋಸೆಫನು ಹೇಲಿಯನಿಗೆ ಹುಟ್ಟಿದನು.


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು.


ಅಂದ್ರೆಯ ಮತ್ತು ಪೇತ್ರನಂತೆ ಫಿಲಿಪ್ಪನು ಕೂಡ ಬೆತ್ಸಾಯಿದ ಎಂಬ ಊರಿನವನು.


ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. “ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು?” ಎಂದು ಯೇಸು ಫಿಲಿಪ್ಪನನ್ನು ಕೇಳಿದರು.


ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು.


ಇವರು ಗಲಿಲೇಯದ ಬೆತ್ಸಾಯಿದ ಎಂಬ ಊರಿನವನಾದ ಫಿಲಿಪ್ಪನ ಬಳಿಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದು ಕೇಳಿಕೊಂಡರು.


ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು.


“ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು