ಯೋಹಾನ 1:48 - ಕನ್ನಡ ಸತ್ಯವೇದವು C.L. Bible (BSI)48 ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ನತಾನಯೇಲನು - ನನ್ನನ್ನು ನೀನು ಹೇಗೆ ಬಲ್ಲೆ? ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು - ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರದ ಮರದ ಕೆಳಗೆ ಇದ್ದಾಗ ನಿನ್ನನ್ನು ನೋಡಿದೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ನತಾನಿಯೇಲನು, “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಕೇಳಿದನು. ಯೇಸು, “ಫಿಲಿಪ್ಪನು ನನ್ನ ಬಗ್ಗೆ ನಿನಗೆ ತಿಳಿಸುವುದಕ್ಕಿಂತ ಮೊದಲೇ ನೀನು ಅಂಜೂರದ ಮರದ ಕೆಳಗಿದ್ದಾಗ ನಾನು ನಿನ್ನನ್ನು ನೋಡಿದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅದಕ್ಕೆ ನತಾನಯೇಲನು, “ನೀವು ನನ್ನನ್ನು ಹೇಗೆ ಬಲ್ಲಿರಿ?” ಎಂದು ಕೇಳಲು, ಯೇಸು ಅವನಿಗೆ, “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮುಂಚೆಯೇ ನೀನು ಅಂಜೂರದ ಮರದ ಕೆಳಗಿರುವುದನ್ನು ನಾನು ಕಂಡೆನು,” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ತನ್ನಾ ನಾಥಾನಾಯೆಲಾನ್ ಜೆಜುಕ್, “ತಿಯಾ ಮಾಕಾ ಕಶೆ ವಳಕ್ತೆಯ್?” ಮನುನ್ ಇಚಾರ್‍ಲ್ಯಾನ್. ಜೆಜುನ್ ತೆಕಾ, “ಫಿಲಿಪಾ ತುಕಾ ಬಲ್ವುಚ್ಯಾ ಅದ್ದಿ ಮಿಯಾ ತುಕಾ ಅಂಜುರಾಚ್ಯಾ ಝಾಡಾಚ್ಯಾ ಬುಡಿ ಹೊತ್ತ್ಯಾ ತನ್ನಾ ಬಗಟ್ಲೊ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |